ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

INDW vs ENGW: ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಗಳಿಸಿದ ಕನ್ನಡತಿ ಶುಭಾ ಸತೀಶ್

Published 14 ಡಿಸೆಂಬರ್ 2023, 10:33 IST
Last Updated 14 ಡಿಸೆಂಬರ್ 2023, 10:33 IST
ಅಕ್ಷರ ಗಾತ್ರ

ನವಿ ಮುಂಬೈ: ಭಾರತದ ವನಿತೆಯರ ತಂಡವು ಇಲ್ಲಿನ ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ.

ಚೊಚ್ಚಲ ಪಂದ್ಯವನ್ನು ಆಡುತ್ತಿರುವ ಕನ್ನಡತಿ ಶುಭಾ ಸತೀಶ್ ಹಾಗೂ ಜೆಮಿಮಾ ರಾಡ್ರಿಗಸ್ ಅರ್ಧಶತಕದ ಸಾಧನೆ ಮಾಡಿದ್ದಾರೆ.

ಈ ಪೈಕಿ 49 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಶುಭಾ, ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡನೇ ವೇಗದ ಅರ್ಧಶತಕ ಗಳಿಸಿದ ಆಟಗಾರ್ತಿ ಎನಿಸಿದರು.

76 ಎಸೆತಗಳನ್ನು ಎದುರಿಸಿದ ಶುಭಾ 69 ರನ್ ಗಳಿಸಿ (13 ಬೌಂಡರಿ) ಔಟ್ ಆದರು. ಅಲ್ಲದೆ ಜೆಮಿಮಾ ಜೊತೆ ಮೂರನೇ ವಿಕೆಟ್‌ಗೆ ಶತಕದ ಜೊತೆಯಾಟದಲ್ಲಿ ಭಾಗಿಯಾದರು.

ಜೆಮಿಮಾ 68 ರನ್ ಗಳಿಸಿ ಮಿಂಚಿದರು. ಕೆಳ ಕ್ರಮಾಂಕದಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ 49 ಹಾಗೂ ಯಸ್ತಿಕಾ ಭಾಟಿಯಾ 66 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು.

ತಾಜಾ ವರದಿಯ ವೇಳೆಗೆ ಭಾರತ ತಂಡವು 75 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 346 ರನ್ ಗಳಿಸಿದೆ.

ಮೂವರು ಪದಾರ್ಪಣೆ...

ಭಾರತದ ಪರ ಮೂವರು ಆಟಗಾರ್ತಿಯರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಶುಭಾ ಸತೀಶ್, ಜೆಮಿಮಾ ರಾಡ್ರಿಗಸ್ ಹಾಗೂ ರೇಣುಕಾ ಸಿಂಗ್ ಚೊಚ್ಚಲ ಟೆಸ್ಟ್ ಕ್ಯಾಪ್ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT