ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಿ20 ವಿಶ್ವಕಪ್ ಟೂರ್ನಿ: ವಿಂಡೀಸ್ ತಂಡಕ್ಕೆ ಪೊವೆಲ್ ನಾಯಕ

Published 26 ಮೇ 2024, 15:14 IST
Last Updated 26 ಮೇ 2024, 15:14 IST
ಅಕ್ಷರ ಗಾತ್ರ

ಸೇಂಟ್ ಜಾನ್ಸ್, ಆ್ಯಂಟಿಗಾ: ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು ರೋವ್ಮನ್ ಪೊವೆಲ್ ಮುನ್ನಡೆಸುವರು. 

ಆದರೆ ಗಾಯಗೊಂಡಿರುವ ಅನುಭವಿ ಆಲ್‌ರೌಂಡರ್ ಜೇಸನ್ ಹೋಲ್ಡರ್ ಅವರು ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಒಬೆದ್ ಮೆಕಾಯ್ ಅವಕಾಶ ಪಡೆದಿದ್ದಾರೆ. 

ಐಪಿಎಲ್‌ನಲ್ಲಿ ಮಿಂಚಿರುವ ಪೊವೆಲ್, ಆ್ಯಂಡ್ರೆ ರಸೆಲ್, ನಿಕೊಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್ ಅವರು ಸ್ಥಾನ ಪಡೆದುಕೊಂಡಿದ್ದಾರೆ. ಆರ್‌ಸಿಬಿ ತಂಡದಲ್ಲಿದ್ದ ಅಲ್ಝರಿ ಜೋಸೆಫ್ ಈ ತಂಡಕ್ಕೆ ಉಪನಾಯಕರಾಗಿದ್ದಾರೆ.

ತಂಡ: ರೋವ್ಮನ್ ಪೊವೆಲ್ (ನಾಯಕ), ಅಲ್ಝರಿ ಜೋಸೆಫ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರಾಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಶಾಯ್ ಹೋಪ್ (ವಿಕೆಟ್‌ಕೀಪರ್), ಅಕೀಲ್ ಹುಸೇನ್, ಶಾಮರ್ ಜೋಸೆಫ್, ಬ್ರೆಂಡನ್ ಕಿಂಗ್, ಒಬೆದ್ ಮೆಕಾಯ್, ಗುಡಕೇಶ್ ಮೋತಿ, ಆ್ಯಂಡ್ರೆ ರಸೆಲ್, ನಿಕೊಲಸ್ ಪೂರನ್ (ವಿಕೆಟ್‌ಕೀಪರ್), ಶೆರ್ಫೆನ್ ರುದರ್‌ಫೋರ್ಡ್, ರೊಮ್ಯಾರಿಯೊ ಶೆಫರ್ಡ್. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT