ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್ ಸರಣಿಗೆ ಕೆ.ಎಲ್. ರಾಹುಲ್ ಇಲ್ಲ?

Last Updated 15 ಜೂನ್ 2022, 16:17 IST
ಅಕ್ಷರ ಗಾತ್ರ

ನವದೆಹಲಿ: ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕೆ.ಎಲ್. ರಾಹುಲ್ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಆಡುವ ಅವಕಾಶವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ದಕ್ಷಿಣ ಆಫ್ರಿಕಾ ಎದುರು ನಡೆಯುತ್ತಿರುವ ಟಿ20 ಸರಣಿಯಲ್ಲಿ ಅವರು ಭಾರತ ತಂಡವನ್ನು ಮುನ್ನಡೆಸಬೇಕಿತ್ತು. ಆದರೆ ಸರಣಿಯ ಮೊದಲ ಪಂದ್ಯಕ್ಕೂ ಮುನ್ನವೇ ತೊಡೆಸ್ನಾಯುವಿನ ಗಾಯದಿಂದ ಬಳಲಿದ್ದರು. ಆದ್ದರಿಂದ ಅವರ ಬದಲಿಗೆ ರಿಷಭ್ ಪಂತ್ ಅವರಿಗೆ ನಾಯಕತ್ವ ನೀಡಲಾಗಿತ್ತು.

‘ರಾಹುಲ್ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಇಂಗ್ಲೆಂಡ್‌ನಲ್ಲಿ ನಡೆಯುವ ಟೆಸ್ಟ್‌ ಸರಣಿಯಲ್ಲಿ ಆಡುವ ತಂಡವು ಮುಂಬೈನಿಂದ ಗುರುವಾರ ಬೆಳಗಿನ ಜಾವ ಲಂಡನ್‌ಗೆ ಪ್ರಯಾಣಿಸಲಿದೆ. ಈ ಬಳಗದೊಂದಿಗೆ ರಾಹುಲ್ ತೆರಳುತ್ತಿಲ್ಲ. ಅವರು ಇನ್ನಷ್ಟು ಕಾಲ ಇಲ್ಲಿ ಆರೈಕೆ ಪಡೆಯುವರು. ವಾರಾಂತ್ಯದಲ್ಲಿ ಫಿಟ್‌ನೆಸ್ ಪರೀಕ್ಷೆಗೊಳಪಟ್ಟ ನಂತರವಷ್ಟೇ ಅವರು ತೆರಳುವ ಕುರಿತು ನಿರ್ಧಾರವಾಗಲಿದೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT