ಮಂಗಳವಾರ, ಮೇ 17, 2022
29 °C

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗೆ ಕಾತರನಾಗಿರುವೆ: ಗಾಯದಿಂದ ಚೇತರಿಸಿಕೊಂಡ ರಾಹುಲ್

ಪಿಟಿಐ Updated:

ಅಕ್ಷರ ಗಾತ್ರ : | |

KL Rahul AFP photo

ಚೆನ್ನೈ: ಮಣಿಕಟ್ಟಿನ ಗಾಯದಿಂದಾಗಿ ಆಸ್ಟ್ರೇಲಿಯಾ ಪ್ರವಾಸ ಅರ್ಧಕ್ಕೆ ಮೊಟಕುಗೊಳಿಸಿ ಭಾರತಕ್ಕೆ ವಾಪಸಾಗಿದ್ದ ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಎದುರು ನೋಡುತ್ತಿರುವುದಾಗಿ ಅವರು ಹೇಳಿದ್ದಾರೆ.

ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಆಡಿದ್ದ ರಾಹುಲ್ ಅವರು ಆಸ್ಟ್ರೇಲಿಯಾ ವಿರುದ್ಧ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿರಲಿಲ್ಲ. ಬಳಿಕ ಎಡಗೈ ಮಣಿಕಟ್ಟಿನ ಗಾಯದಿಂದಾಗಿ ವಾಪಸಾಗಿದ್ದರು.

ಓದಿ: 

ಬಳಿಕ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರಕ್ಕೆ ಹಾಜರಾಗಿದ್ದರು.

‘ಪುನಶ್ಚೇತನ ಶಿಬಿರವನ್ನು ಯಶಸ್ವಿಯಾಗಿ ಪೂರ್ತಿಗೊಳಿಸಿರುವುದಕ್ಕೆ ಸಂತಸವಿದೆ. ಕ್ಷಮತೆ ಹಾಗೂ ಆರೋಗ್ಯಪೂರ್ಣವಾಗಿ ಮರಳಿರುವುದಕ್ಕಿಂತ ದೊಡ್ಡ ಸಂತಸವಿಲ್ಲ. ಟೀಂ ಇಂಡಿಯಾಕ್ಕೆ ಮರಳಿರುವುದು ಮತ್ತು ಆಡುವುದು ಸಂತಸ, ಗೌರವದ ವಿಚಾರ. ತವರಿನಲ್ಲಿ ನಡೆಯುವ ಸರಣಿಯನ್ನು ಎದುರುನೋಡುತ್ತಿದ್ದೇನೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ನಿಗದಿತ ಓವರ್‌ಗಳ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ಅರ್ಧಶತಕ ಗಳಿಸಿರುವ ರಾಹುಲ್ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಓದಿ: 

ಮೊದಲ ಟೆಸ್ಟ್ ಪಂದ್ಯ ಚೆನ್ನೈನಲ್ಲಿ ಫೆಬ್ರುವರಿ 5ರಿಂದ ಆರಂಭವಾಗಲಿದೆ. ಎರಡನೇ ಪಂದ್ಯ ಚೆನ್ನೈನಲ್ಲಿಯೇ ಫೆಬ್ರುವರಿ 13ರಿಂದ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು