ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೃದಯಾಘಾತಕ್ಕೊಳಗಾಗಿಲ್ಲ, ಆರೋಗ್ಯವಾಗಿದ್ದೇನೆ: ಇಂಜಮಾಮ್ ಉಲ್ ಹಕ್

ಫಾಲೋ ಮಾಡಿ
Comments

ಲಾಹೋರ್: ಹೃದಯಾಘಾತಕ್ಕೊಳಗಾಗಿಲ್ಲ, ಆರೋಗ್ಯವಾಗಿದ್ದೇನೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ತಿಳಿಸಿದ್ದಾರೆ.

ಹಕ್ ಅವರಿಗೆ ಲಘು ಹೃದಯಾಘಾತವಾಗಿತ್ತು ಎಂದು ಮಂಗಳವಾರ ವರದಿಯಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೊ ಸಂದೇಶ ಪ್ರಕಟಿಸಿರುವ ಅವರು, ‘ಮಂಗಳವಾರ ಸಂಜೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ವೈದ್ಯರ ಬಳಿಗೆ ತಪಾಸಣೆಗೆ ತೆರಳಿದ್ದೆ. ತಪಾಸಣೆ ನಡೆಸಿದ ವೈದ್ಯರು ಹೃದಯದ ಒಂದು ರಕ್ತನಾಳದಲ್ಲಿ ರಕ್ತ ಚಲನೆಗೆ ಅಡ್ಡಿಯುಂಟಾಗಿದ್ದು, ಆ್ಯಂಜಿಯೊಪ್ಲಾಸ್ಟಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಅದರಂತೆ ಆ್ಯಂಜಿಯೊಪ್ಲಾಸ್ಟಿ ಮಾಡಿಸಿಕೊಂಡಿದ್ದೇನೆ. ಈಗ ಆರೋಗ್ಯವಾಗಿದ್ದೇನೆ’ ಎಂದು ಹೇಳಿದ್ದಾರೆ.

‘ಪಾಕಿಸ್ತಾನ ಜನರು, ಕ್ರಿಕೆಟ್ ಅಭಿಮಾನಿಗಳು ಮತ್ತು ವಿಶ್ವದ ಹಲವೆಡೆಗಳಿಂದ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT