ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ 11ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಗೆಲುವಿಗಾಗಿ ಹೋರಾಟ ನಡೆಸಲಿವೆ.

ಸದ್ಯ ಸನ್‌ರೈಸರ್ಸ್ ಎದುರು ಟಾಸ್ ಗೆದ್ದಿರುವ ಕೊಹ್ಲಿ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಆರ್‌ಸಿಬಿ ತಂಡ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಏಳು ವಿಕೆಟ್‌ಗಳಿಂದ ಸೋತಿತ್ತು. ಬಳಿಕ ಬೆಂಗಳೂರಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ 2ನೇ ಪಂದ್ಯದಲ್ಲಿ 6 ರನ್ ಗಳಿಂದ ಸೋತಿತ್ತು.

ಇದೀಗ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಡೇವಿಡ್ ವಾರ್ನರ್ ಅವರ ಕಠಿಣ ಸವಾಲು ಎದುರಿಸುವ ಒತ್ತಡ ಆರ್‌ಸಿಬಿ ತಂಡಕ್ಕಿದೆ.

ಇದೇ ಅಂಗಳದಲ್ಲಿ ಶುಕ್ರವಾರ ನಡೆದಿದ್ದ ಪಂದ್ಯದಲ್ಲಿ ಡೇವಿಡ್ ವಾರ್ನರ್ (69;37ಎಸೆತ, 9ಬೌಂಡರಿ, 2ಸಿಕ್ಸರ್)ಅಬ್ಬರದ ಬ್ಯಾಟಿಂಗ್‌ನಿಂದಾಗಿ ರಾಜಸ್ಥಾನ್ ತಂಡವು ಕೊಟ್ಟಿದ್ದ 198 ರನ್‌ಗಳ ಕಠಿಣ ಗುರಿಯನ್ನು 19 ಓವರ್‌ಗಳಲ್ಲಿ ಸಾಧಿಸಿತ್ತು. ಅವರೊಂದಿಗೆ ಜಾನಿ ಬೆಸ್ಟೊ, ವಿಜಯಶಂಕರ್, ರಶೀದ್ ಖಾನ್ ಮತ್ತು ಯೂಸುಫ್ ಪಠಾಣ್ ಕೂಡ ಮಿಂಚಿದ್ದರು.

ತಂಡಗಳು ಇಂತಿವೆ:
ಆರ್‌ಸಿಬಿ: ವಿರಾಟ್ ಕೊಹ್ಲಿ (ನಾಯಕ), ಪಾರ್ಥಿವ್ ಪಟೇಲ್ (ವಿಕೆಟ್‌ಕೀಪರ್), ಎಬಿ ಡಿವಿಲಿಯರ್ಸ್, ಮೊಯಿನ್ ಅಲಿ, ಶಿಮ್ರೊನ್ ಹೆಟ್ಮೆಯರ್, ಶಿವಂ ದುಬೆ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಉಮೇಶ್ ಯಾದವ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಪವನ್ ನೇಗಿ, ವಾಷಿಂಗ್ಟನ್ ಸುಂದರ್, ಟಿಮ್ ಸೌಥಿ, ಗುರುಕೀರತ್ ಸಿಂಗ್ ಮಾನ್, ಹೆನ್ರಿಚ್ ಕ್ಲಾಸನ್, ಅಕ್ಷದೀಪ್ ನಾಥ್, ಕುಲವಂತ ಖೆಜ್ರೋಲಿಯಾ.

ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಡೇವಿಡ್ ವಾರ್ನರ್, ಜಾನಿ ಬೆಸ್ಟೊ, ಮನೀಷ್ ಪಾಂಡೆ, ವಿಜಯಶಂಕರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಮಾರ್ಟಿನ್ ಗಪ್ಟಿಲ್, ವೃದ್ಧಿಮಾನ್ ಸಹಾ, ಬಿಲಿ ಸ್ಟಾನ್‌ಲೇಕ್, ಶಕೀಬ್ ಅಲ್ ಹಸನ್, ಬಾಸಿಲ್ ಥಂಪಿ, ಶ್ರೀವತ್ಸ ಗೋಸ್ವಾಮಿ. ದೀಪಕ್ ಹೂಡಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.