ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಿ ಬೆಸ್ಟೊ -ವಾರ್ನರ್ ಶತಕ: ಆರ್‌ಸಿಬಿ ಗೆಲುವಿಗೆ 232 ಗುರಿ 

Last Updated 31 ಮಾರ್ಚ್ 2019, 12:54 IST
ಅಕ್ಷರ ಗಾತ್ರ

ಹೈದರಾಬಾದ್: ಇಲ್ಲಿನ ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ವಿರುದ್ಧ ಹೈದರಾಬಾದ್‌ ಬೃಹತ್‌ ಮೊತ್ತ ಪೇರಿಸಿದೆ.

ಸನ್‌ರೈಸರ್ಸ್‌ ಎದುರು ಟಾಸ್‌ ಗೆದ್ದಿರುವ ಕೊಹ್ಲಿ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.

ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ಜಾನಿ ಬೆಸ್ಟೊ (114), ಡೇವಿಡ್ ವಾರ್ನರ್ (100*) ಅವರ ಶತಕದ ಬಲದಿಂದ 20 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 231 ರನ್‌ ಗಳಿಸಿದೆ.

ಆರ್‌ಸಿಬಿ ಪರ ಯಜುವೇಂದ್ರ ಚಾಹಲ್‌ 1 ವಿಕೆಟ್‌ ಪಡೆದರು.

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ಆರ್‌ಸಿಬಿ 6.2 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 30 ರನ್‌ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT