ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲೇ ನಡೆಯಲಿದೆ ಐಪಿಎಲ್‌: ಮಾರ್ಚ್‌ 23ರಿಂದ ಆರಂಭ

ಅನುಮಾನಗಳಿಗೆ ತೆರೆ
Last Updated 8 ಜನವರಿ 2019, 12:35 IST
ಅಕ್ಷರ ಗಾತ್ರ

ನವದೆಹಲಿ:ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ ಭದ್ರತೆಯ ದೃಷ್ಟಿಯಿಂದಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟ್ವೆಂಟಿ–20 ಕ್ರಿಕೆಟ್‌ ಟೂರ್ನಿ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಆದರೆ, ಊಹಾಪೋಹಗಳಿಗೆ ಈಗ ತೆರೆ ಎಳೆಯಲಾಗಿದ್ದು, 12ನೇ ಆವೃತ್ತಿಯ ಐಪಿಎಲ್‌ ಪಂದ್ಯಾವಳಿಗಳು ಮಾರ್ಚ್‌ 23ರಿಂದ ಭಾರತದಲ್ಲೇ ನಡೆಯಲಿವೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಸ್ಥೆಗಳು ಮತ್ತು ಅಧಿಕಾರಿಗಳ ಜತೆ ಪ್ರಾಥಮಿಕ ಹಂತದ ಸಭೆ ನಡೆಸಲಾಗಿದ್ದು, ಪ್ರಸಿದ್ಧ ಮತ್ತು ಸ್ಪರ್ಧಾತ್ಮಕ12ನೇ ಆವೃತ್ತಿಯ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲು ತೀರ್ಮಾನಿಸಲಾಗಿದೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಫೈನಲ್ ಪಂದ್ಯ, ದಿನಾಂಕ ಮತ್ತಿತರ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದೆ.

ಕಳೆದ ತಿಂಗಳಷ್ಟೇಐಪಿಎಲ್‌ ಆಟಗಾರರ ಹರಾಜು ಪ್ರಕ್ರಿಯೆ ನಡೆದಿತ್ತು.ತಮಿಳುನಾಡಿನ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಮತ್ತುವೇಗದ ಬೌಲರ್‌ ಜಯದೇವ್‌ ಉನದ್ಕತ್‌ ತಲಾ ₹ 8.4 ಕೋಟಿಗೆ ಹರಾಜಾಗಿ ಅತಿ ಹೆಚ್ಚು ಮೊತ್ತಕ್ಕೆ ಹರಾಜಾದ ಆಟಗಾರರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT