ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಐಪಿಎಲ್–2020 | 20 ಕೋಟಿ ಜನರಿಂದ ಉದ್ಘಾಟನಾ ಪಂದ್ಯ ವೀಕ್ಷಣೆ: ಜಯ್‌ ಶಾ

Last Updated 29 ಸೆಪ್ಟೆಂಬರ್ 2020, 11:37 IST
ಅಕ್ಷರ ಗಾತ್ರ

ನವದೆಹಲಿ: ಈ ಬಾರಿಯ ಐ‍‍ಪಿಎಲ್‌ ಟೂರ್ನಿಯು ದುಬೈನಲ್ಲಿ ಸೆಪ್ಟೆಂಬರ್‌ 19ರಂದು ಆರಂಭವಾಯಿತು. ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳ ನಡುವೆ ನಡೆದ ಉದ್ಘಾಟನಾ ಪಂದ್ಯವನ್ನು ಬರೋಬ್ಬರಿ 20 ಕೋಟಿ ಜನರು ಟಿವಿ ಹಾಗೂ ಡಿಜಿಟಲ್‌ ಮೀಡಿಯಾ ವೇದಿಕೆಗಳಲ್ಲಿ ವೀಕ್ಷಿಸಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಿಳಿಸಿದ್ದಾರೆ.

ಬಹುತೇಕ ಆರು ತಿಂಗಳ ಬಳಿಕ ಭಾರತೀಯ ಕ್ರಿಕೆಟಿಗರು ಮೈದಾನಕ್ಕೆ ಮರಳಿದ್ದಾರೆ. ಜೊತೆಗೆ ಕೋವಿಡ್‌–19 ಕಾರಣದಿಂದಾಗಿ ಈ ಬಾರಿಯ ಐಪಿಎಲ್ ಟೂರ್ನಿ ಯುಎಇಯಲ್ಲಿ ಖಾಲಿ ಕ್ರೀಡಾಂಗಣಗಳಲ್ಲಿ ನಡೆಯುತ್ತಿವೆ. ಹಾಗಾಗಿ ಪಂದ್ಯಗಳು ದೊಡ್ಡ ಸಂಖ್ಯೆಯಲ್ಲಿ ವೀಕ್ಷಣೆಯಾಗುವುದರ ನೀರೀಕ್ಷೆಯಿತ್ತು.

ಈ ಬಗ್ಗೆ ಟ್ವೀಟ್‌ ಮಾಡಿರುವ ಶಾ,‘ಡ್ರೀಮ್‌ ಇಲವೆನ್‌ ಐಪಿಎಲ್‌ ಹೊಸ ದಾಖಲೆ ನಿರ್ಮಿಸಿದೆ! ಬಾರ್ಕ್‌ ಮಾಹಿತಿ ಪ್ರಕಾರ, ಅಭೂತಪೂರ್ವ 20 ಕೋಟಿ ಜನರು ಪಂದ್ಯವನ್ನು ವೀಕ್ಷಿಸಿದ್ದಾರೆ. ಯಾವುದೇ ದೇಶದಲ್ಲಿ ನಡೆಯುವ ಕ್ರೀಡಾಕೂಟದ ಮೊದಲದಿನದ ಗರಿಷ್ಠ ಸಂಖ್ಯೆಯ ವೀಕ್ಷಣೆ ಇದಾಗಿದೆ. ಯಾವುದೇ ಲೀಗ್‌ ಇಷ್ಟು ದೊಡ್ಡ ಮಟ್ಟದಲ್ಲಿ ಆರಂಭವಾಗಿರಲಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಭಾರತಕ್ಕೆ ಎರಡು ವಿಶ್ವಕಪ್‌ಗಳನ್ನು ಗೆದ್ದುಕೊಟ್ಟ ನಾಯಕ ಎಂಎಸ್‌ ಧೊನಿ ಕಳೆದ ತಿಂಗಳು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಅವರು ಸಿಎಸ್‌ಕೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಉದ್ಘಾಟನಾ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈಇಂಡಿಯನ್ಸ್‌ 163 ರನ್‌ ಗಳಿಸಿತ್ತು. ಧೋನಿ ಪಡೆ ಈ ಗುರಿಯನ್ನು ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ ಮುಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT