ಶನಿವಾರ, ಅಕ್ಟೋಬರ್ 31, 2020
27 °C

ಐಪಿಎಲ್–2020: 5 ಸಾವಿರ ರನ್ ಪೂರೈಸಿದ ರೋಹಿತ್ ಶರ್ಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮಾ ಐಪಿಎಲ್‌ನಲ್ಲಿ ಐದು ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು. ಇದರೊಂದಿಗೆ ಈ ಸಾಧನೆ ಮಾಡಿದ ಮೂರನೇ ಬ್ಯಾಟ್ಸ್‌ಮನ್‌ ಎಂಬ ಶ್ರೇಯಕ್ಕೆ ಭಾಜನರಾದರು.

ರೋಹಿತ್‌ ಐಪಿಎಲ್‌ನಲ್ಲಿ ಇದುವರೆಗೆ 192 ಪಂದ್ಯಗಳ 187 ಇನಿಂಗ್ಸ್‌ಗಳಲ್ಲಿ ಬ್ಯಾಟ್‌ ಬೀಸಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸುರೇಶ್‌ ರೈನಾ ಐಪಿಎಲ್‌ನಲ್ಲಿ 5 ಸಾವಿರ ರನ್‌ ಕಲೆಹಾಕಿರುವ ಇನ್ನಿಬ್ಬರು ಬ್ಯಾಟ್ಸ್‌ಮನ್‌ಗಳು. ಕೊಹ್ಲಿ 172 ಇನಿಂಗ್ಸ್‌ಗಳಲ್ಲಿ 5,430 ರನ್‌ ಮತ್ತು ರೈನಾ 189 ಇನಿಂಗ್ಸ್‌ಗಳಲ್ಲಿ 5,368 ರನ್‌ ಕಲೆಹಾಕಿದ್ದಾರೆ.

ಇಂದು ಅಬುಧಾಬಿಯಲ್ಲಿ ಕಿಂಗ್ಸ್‌ ಇಲವೆನ್‌ ಪಂಜಾಬ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳು ಸೆಣಸಾಟ ನಡೆಸುತ್ತಿವೆ. ಈ ತಂಡಗಳು ಅಂಕಪಟ್ಟಿಯಲ್ಲಿ ಕ್ರಮವಾಗಿ 5 ಮತ್ತು 6ನೇ ಸ್ಥಾನಗಳಲ್ಲಿವೆ.

ಸದ್ಯ ಮೂರು ಓವರ್‌ಗಳ ಮುಕ್ತಾಯವಾಗಿದ್ದು, ಮುಂಬೈ 1 ವಿಕೆಟ್‌ ಕಳೆದುಕೊಂಡು 18 ರನ್‌ ಗಳಿಸಿದೆ. ನಾಯಕ ರೋಹಿತ್‌ (9) ಮತ್ತು ಸೂರ್ಯಕುಮಾರ್‌ ಯಾದವ್ (9)‌ ಕ್ರೀಸ್‌ನಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು