ಶುಕ್ರವಾರ, ಅಕ್ಟೋಬರ್ 23, 2020
26 °C

‘5000 ರನ್‌ ಗಳಿಸಿದ ಆಟಗಾರರ ನಿಷೇಧಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಅವರು ಐಪಿಎಲ್‌ನಲ್ಲಿ ಐದು ಸಾವಿರಕ್ಕೂ ಹೆಚ್ಚು ರನ್‌ ಕಲೆಹಾಕಿದ್ದಾರೆ. ಅವರನ್ನು ಟೂರ್ನಿಯಿಂದ ನಿಷೇಧಿಸಿದರೆ ಉಳಿದವರಿಗೆ ಸಾಧನೆ ಮಾಡಲು ಅವಕಾಶ ಸಿಗುತ್ತದೆ ಎಂದು ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಚಟಾಕಿ ಹಾರಿಸಿದ್ದಾರೆ.

ಬುಧವಾರ ರಾತ್ರಿ ನಡೆದ ಇನ್ಸ್ಠಾಗ್ರಾಮ್ ಸಂವಾದದಲ್ಲಿ, ‘ಐಪಿಎಲ್‌ನಲ್ಲಿ ಹೊಸ ನಿಯಮಗಳೆನಾದರೂ ಬರಬೇಕೆಂದು ಅಪೇಕ್ಷಿಸುತ್ತೀರಾ’ ಎಂಬ ಪ್ರಶ್ನೆಗೆ ರಾಹುಲ್ ತಮಾಷೆಯಾಗಿ ಪ್ರತಿಕ್ರಿಯಿಸಿದರು.

‘ಚುಟುಕು ಮಾದರಿ ಮತ್ತು ಐಪಿಎಲ್‌ನಲ್ಲಿ ಐದು ಸಾವಿರ ರನ್ ಪೂರೈಸಿರುವ ವಿರಾಟ್ ಕೊಹ್ಲಿ ಮತ್ತು ಎಬಿಡಿ ಅವರನ್ನು ಕೆಲವು ವರ್ಷಗಳ ಮಟ್ಟಿಗಾದರೂ ಆಡದಂತೆ ನಿಷೇಧಿಸಬೇಕು. ಅವರಿಬ್ಬರಿಗೂ ಅಷ್ಟೇ ಸಾಕೆನಿಸುತ್ತದೆ. ಉಳಿದವರಿಗೂ ಒಂದಿಷ್ಟು ಅವಕಾಶ ಸಿಗಲಿ’ ಎಂದರು. ಸಂವಾದದಲ್ಲಿ ಹಾಜರಿದ್ದ ಕೊಹ್ಲಿ ಕೂಡ ನಕ್ಕರು.

ರಾಹುಲ್ ಅವರ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಹಳಷ್ಟು ಜನರಿಂದ ಮೆಚ್ಚುಗೆ ಗಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು