ಮಂಗಳವಾರ, ಅಕ್ಟೋಬರ್ 20, 2020
23 °C

IPL–2020 | RR vs KKR: ಟಾಮ್‌ ಕರನ್‌ ಅರ್ಧ ಶತಕ ವ್ಯರ್ಥ, ಕೆಕೆಆರ್‌ಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಕೋಲ್ಕತ್ತ ನೈಟ್‌ ರೈಡರ್ಸ್‌ ತಂಡ 37 ರನ್‌ ಅಂತರದಿಂದ ಗೆಲುವು ಸಾಧಿಸಿದೆ.

ಇಲ್ಲಿನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 12ನೇ ಪಂದ್ಯದಲ್ಲಿ ಕೆಕೆಆರ್‌ ಎದುರು ಟಾಸ್‌ ಗೆದ್ದ ರಾಯಲ್ಸ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು.

ಮೊದಲು ಬ್ಯಾಟಿಂಗ್‌ ಮಾಡಿದ ದಿನೇಶ್‌ ಕಾರ್ತಿಕ್‌ ಪಡೆ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 174 ರನ್‌ ಗಳಿಸಿತ್ತು.

175 ರನ್‌ ಗುರಿ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ ಪರ ಟಾಮ್‌ ಕರನ್‌ ಔಟಾಗದೆ 54, ಜೋಶ್‌ ಬಟ್ಲರ್‌ 21 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಬಳಿಕ ಕ್ರೀಸ್‌ಗೆ ಬಂದ ಯಾವೊಬ್ಬ ಆಟಗಾರರೂ ಕೂಡ ಹೆಚ್ಚು ಸಮಯ ಆಟವಾಡಲಿಲ್ಲ.

ಈ ಟೂರ್ನಿಯಲ್ಲಿ ಕೆಕೆಆರ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದಿದ್ದು, ಒಂದರಲ್ಲಿ ಸೋತಿದೆ. ಇತ್ತ ರಾಜಸ್ಥಾನ್‌ ರಾಯಲ್ಸ್‌ ಆಡಿರುವ ಮೂರು ಪಂದ್ಯಗಳಲ್ಲಿ ಎರಡಲ್ಲಿ ಗೆದ್ದಿದ್ದು, ಒಂದರಲ್ಲಿ ಸೋಲು ಅನುಭವಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು