ಮಂಗಳವಾರ, ಅಕ್ಟೋಬರ್ 27, 2020
19 °C

IPL 2020| ಗ್ಲೂಕೋಸ್‌ ತೆಗೆದುಕೊಳ್ಳಿ: ಸಿಎಸ್‌ಕೆ ಆಟಗಾರರಿಗೆ ಸೆಹ್ವಾಗ್‌ ಸಲಹೆ!

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನ ಬ್ಯಾಟ್ಸ್‌ಮನ್‌ಗಳು ತೋರಿಸುತ್ತಿರುವ ಕಳಪೆ ಪ್ರದರ್ಶನವನ್ನು ಗೇಲಿ ಮಾಡಿರುವ ಭಾರತದ ಮಾಜಿ ಕ್ರಿಕೆಟರ್‌ ವೀರೇಂದ್ರ ಸೆಹ್ವಾಗ್, ಪಂದ್ಯಕ್ಕೂ ಮೊದಲು ಗ್ಲೂಕೋಸ್‌ ತೆಗೆದುಕೊಂಡು ಬರುವಂತೆ ಧೋನಿ ನೇತೃತ್ವದ ತಂಡಕ್ಕೆ ಸಲಹೆ ನೀಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಶುಕ್ರವಾರ ದೆಹಲಿ ಕ್ಯಾಪಿಟಲ್ಸ್ ವಿರುದ್ಧ 44 ರನ್‌ಗಳಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಸೋಲುಂಡಿತ್ತು. ಇದೇ ಹಿನ್ನೆಲೆಯಲ್ಲಿ ಸೆಹ್ವಾಗ್‌ ಮೂದಲಿಕೆ ಮಾಡಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಬ್ಯಾಟ್ಸ್‌ಮನ್‌ಗಳು ಸರಿಯಾಗಿ ಆಡುತ್ತಿಲ್ಲ. ಮುಂದಿನ ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡಲು ಅವರು ಗ್ಲೂಕೋಸ್‌ ತೆಗೆದುಕೊಳ್ಳಬೇಕಾಗಬಹುದು ಎಂದು ಅವರು ಟ್ವೀಟ್‌ ಮಾಡಿ ಸಲಹೆ ನೀಡಿದ್ದಾರೆ.

ದೆಹಲಿ ಕ್ಯಾಪಿಟಲ್ಸ್‌ ನೀಡಿದ್ದ 176ರನ್‌ ಚೆಸ್‌ ಮಾಡಿದ್ದ ಚರನ್ನೈ ಸೂಪರ್‌ ಕಿಂಗ್ಸ್‌ ತಂಡ 20 ಓವರ್‌ಗಳಲ್ಲಿ 131/7 ಗಳಿಸಿ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಧೋನಿ ಮತ್ತೆ 6ನೇ ಕ್ರಮಾಂಕದಲ್ಲಿ ಆಡಲು ಬಂದರು. ಆದರೆ, 16ಮೇ ಓವರ್‌ನಲ್ಲಿ ಅವರೂ ಔಟಾಗಿ ಪೆವಿಲಿಯನ್‌ ಸೇರಿದರು.

ರಾಜಸ್ಥಾನ್‌ ರಾಯಲ್ಸ್‌ ಮತ್ತು ದೆಹಲಿ ಕ್ಯಾಪಿಟಲ್ಸ್‌ ವಿರುದ್ಧ ಚೇಸಿಂಗ್‌ನಲ್ಲೇ ವಿಫಲವಾಗಿರುವ ಚೆನ್ನೈ ತಂಡ ಬ್ಯಾಟಿಂಗ್‌ ವಿಭಾಗದಲ್ಲಿ ಸೋತಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು