ಸೋಮವಾರ, ಮೇ 16, 2022
24 °C

IPL| ಹೊಡಿ-ಬಡಿ ಆಟಗಾರ ಮಾಕ್ಸ್‌ವೆಲ್‌ರನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದ RCB

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚೆನ್ನೈ: ಐಪಿಎಲ್ ಆಟಗಾರರ ಹರಾಜಿನಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದೊಡ್ಡ ಮೊತ್ತ ನೀಡಿ ತನ್ನದಾಗಿಸಿಕೊಂಡಿದೆ.

ಇದನ್ನು ಓದಿ: ಆಟಗಾರರ ಹರಾಜು ಪ್ರಕ್ರಿಯೆಯ ಕ್ಷಣ ಕ್ಷಣದ ಮಾಹಿತಿ 

ಬರೊಬ್ಬರಿ ₹14.25 ಕೋಟಿಗೆ ಮ್ಯಾಕ್ಸ್‌ವೆಲ್‌ರನ್ನು ಆರ್‌ಸಿಬಿ ಖರೀದಿಸಿದೆ. ಅವರ ಮೂಲ ಬೆಲೆ ₹2 ಕೋಟಿ ಆಗಿತ್ತು. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನೊಂದಿಗೆ ನಡೆದ ಬಿಡ್ಡಿಂಗ್ ಯುದ್ಧದಲ್ಲಿ ಅಂತಿಮವಾಗಿ ಮ್ಯಾಕ್ಸ್‌ವೆಲ್‌ ಬೆಂಗಳೂರು ಪಾಲಾದರು.

ಕಳೆದ ಐಪಿಎಲ್‌ ಆವೃತ್ತಿಯಲ್ಲಿ ಕಳಪೆ ಆಟ ಪ್ರದರ್ಶಿಸಿದ್ದ ಮ್ಯಾಕ್ಸ್‌ವೆಲ್‌ರನ್ನು ಪಂಜಾಬ್‌ ಕಿಂಗ್ಸ್‌ ತಂಡ ಈ ಬಾರಿಗೆ ಹರಾಜಿಗಿಟ್ಟಿತ್ತು.

ಆರ್‌ಸಿಬಿ ತಮ್ಮನ್ನು ಖರೀದಿಸುತ್ತಲೇ ಟ್ವೀಟ್‌ ಮಾಡಿರುವ ಗ್ಲೆನ್‌ ಮ್ಯಾಕ್ಸ್‌ವೆಲ್‌, 'ಈ ವರ್ಷ ಐಪಿಎಲ್‌ನಲ್ಲಿ ಆರ್‌ಸಿಬಿಗೆ ಸೇರುತ್ತಿದ್ದೇನೆ. ಟ್ರೋಫಿ ಗೆಲ್ಲುವಲ್ಲಿ ನನ್ನೆಲ್ಲ ಪ್ರಯತ್ನ ಹಾಕಲು ಕಾತರನಾಗಿದ್ದೇನೆ,' ಎಂದು ಅವರು ಹೇಳಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು