ಮಂಗಳವಾರ, ಮೇ 18, 2021
30 °C

IPL 2021: ಧೋನಿ ಮೈಲಿಗಲ್ಲು; ಕೇಕ್ ಕತ್ತರಿಸಿ ಸಂಭ್ರಮಾಚರಣೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಪರ 200 ಪಂದ್ಯಗಳ ಮೈಲಿಗಲ್ಲು ತಲುಪಿರುವ ಮಹೇಂದ್ರ ಸಿಂಗ್ ಧೋನಿ, ಕೇಕ್ ಕತ್ತರಿಸುವ ಮೂಲಕ ಸಂಭ್ರಮವನ್ನು ಆಚರಿಸಿದ್ದಾರೆ.

ಶುಕ್ರವಾರದಂದು ಪಂಜಾಬ್ ಕಿಂಗ್ಸ್ ವಿರುದ್ಧ ದಾಖಲಾದ ಗೆಲುವು ಧೋನಿ ಹಾಗೂ ಚೆನ್ನೈ ತಂಡದ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು.

ಸಿಎಸ್‌ಕೆ ತಂಡದ ಸಹ ಆಟಗಾರರು ಹಾಗೂ ಕೋಚ್ ಮತ್ತು ಸಹಾಯಕ ಸಿಬ್ಬಂದಿಗಳ ಸಮ್ಮುಖದಲ್ಲಿ ನಾಯಕ ಧೋನಿ ಕೇಕ್ ಕತ್ತರಿಸಿ, ಎಲ್ಲರಿಗೂ ಹಂಚಿದರು.

ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡವು ಮೂರು ಬಾರಿ ಐಪಿಎಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಅಲ್ಲದೆ ಒಟ್ಟು ಎಂಟು ಬಾರಿ ಫೈನಲ್ ಪ್ರವೇಶಿಸಿದ ಖ್ಯಾತಿಗೂ ಪಾತ್ರವಾಗಿದೆ.

ಚೆನ್ನೈ ಪರ ಧೋನಿ ಐಪಿಎಲ್‌ನಲ್ಲಿ 176 ಹಾಗೂ ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯಲ್ಲಿ 24 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.

2008ರಲ್ಲಿ ಚೊಚ್ಚಲ ಐಪಿಎಲ್ ಆವೃತ್ತಿಯಿಂದಲೇ ಚೆನ್ನೈ ತಂಡವನ್ನು ಧೋನಿ ಮುನ್ನಡೆಸುತ್ತಿದ್ದಾರೆ. 2016 ಹಾಗೂ 2017ನೇ ಸಾಲಿನಲ್ಲಿ ಮ್ಯಾಚ್ ಫಿಕ್ಸಿಂಗ್ ಹಗರಣ ಸಂಬಂಧ ಚೆನ್ನೈ ತಂಡವನ್ನು ನಿಷೇಧಿಸಿದ ಕಾರಣ ಧೋನಿ, ಪುಣೆ ಸೂಪರ್ ಜೈಂಟ್ಸ್ ಹಾಗೂ ಪುಣೆ ವಾರಿಯರ್ಸ್ ತಂಡಗಳನ್ನು ಪ್ರತಿನಿಧಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು