ಮಂಗಳವಾರ, ಏಪ್ರಿಲ್ 20, 2021
32 °C

IPL 2021: ಎಲ್ಲ ಎಂಟು ತಂಡಗಳ ಸಂಪೂರ್ಣ ವೇಳಾಪಟ್ಟಿ ಇಂತಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: 2021ನೇ ಸಾಲಿನ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯು ಏಪ್ರಿಲ್ 9ರಿಂದ ಆರಂಭವಾಗಿ ಮೇ 30ರ ವರೆಗೆ ಜರಗಲಿವೆ. 

ಎಲ್ಲ ಎಂಟು ಫ್ರಾಂಚೈಸಿಗಳು 'ಹೋಮ್' ಹಾಗೂ 'ಅವೇ' ಪಂದ್ಯಗಳನ್ನು ತಟಸ್ಥ ತಾಣಗಳಲ್ಲಿ ಆಡಲಿವೆ. ಅಲ್ಲದೆ ಈ ಬಾರಿಯ ಐಪಿಎಲ್ ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಒಟ್ಟು ಆರು ನಗರಗಳು ಆತಿಥ್ಯ ವಹಿಸಲಿದೆ. 

ಸ್ಟೇಡಿಯಂಗೆ ಪ್ರವೇಶಿಸಲು ಪ್ರೇಕ್ಷಕರಿಗೆ ಅನುಮತಿ ನೀಡಬೇಕೇ ಎಂಬುದರ ಕುರಿತು ಟೂರ್ನಿಯ ಮುಂದಿನ ಹಂತದಲ್ಲಿ ಐಪಿಎಲ್ ಆಡಳಿತ ಮಂಡಳಿಯು ನಿರ್ಧರಿಸಲಿದೆ. 

ಇದನ್ನೂ ಓದಿ: 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹೋಮ್ ಹಾಗೂ ಅವೇ ಪಂದ್ಯಗಳನ್ನು ಚೆನ್ನೈ, ಮುಂಬೈ, ಅಹಮದಾಬಾದ್ ಹಾಗೂ ಕೋಲ್ಕತ್ತ ನಗರಗಳಲ್ಲಿ ಆಡಲಿವೆ. ಏಪ್ರಿಲ್ 9ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದ್ದು, ಮೇ 23ರಂದು ಕೊನೆಯ ಲೀಗ್ ಪಂದ್ಯದಲ್ಲಿ ಕೋಲ್ಕತ್ತದಲ್ಲಿ ಚೆನ್ನೈ ಸವಾಲನ್ನು ಎದುರಿಸಲಿದೆ. 

ಕೋವಿಡ್-19 ಮಾನದಂಡ ಪಾಲನೆ ಮಾಡುವುದರೊಂದಿಗೆ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ವೇಳಾಪಟ್ಟಿ ರಚಿಸಲಾಗಿದೆ. ಲೀಗ್ ಹಂತದಲ್ಲಿ ಎಲ್ಲ ಎಂಟು ತಂಡಗಳು ನಾಲ್ಕು ತಾಣಗಳಲ್ಲಿ ಪಂದ್ಯಗಳನ್ನು ಆಡಲಿವೆ. ಒಟ್ಟು 56 ಲೀಗ್ ಪಂದ್ಯಗಳ ಪೈಕಿ ಬೆಂಗಳೂರು, ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತದಲ್ಲಿ ತಲಾ 10 ಪಂದ್ಯಗಳು ಮತ್ತು ಅಹಮದಾಬಾದ್ ಹಾಗೂ ದೆಹಲಿಯಲ್ಲಿ ತಲಾ ಎಂಟು ಪಂದ್ಯಗಳು ಆಯೋಜನೆಯಾಗಲಿವೆ. 

ಪ್ಲೇ-ಆಫ್ ಹಾಗೂ ಫೈನಲ್ ಪಂದ್ಯಗಳು ಗುಜರಾತ್‌ನ ಅಹಮದಾಬಾದ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದು ಕ್ವಾಲಿಫೈಯರ್ 1, ಎಲಿಮಿನೇಟರ್ ಹಾಗೂ ಕ್ವಾಲಿಫೈಯರ್ 2 ಪಂದ್ಯಗಳನ್ನು ಒಳಗೊಂಡಿವೆ. 

ಇದನ್ನೂ ಓದಿ: 

ಐಪಿಎಲ್ 2021 ಸಂಪೂರ್ಣ ವೇಳಾಪಟ್ಟಿ ಇಂತಿದೆ:
 

ಐಪಿಎಲ್ 2021 ವೇಳಾಪಟ್ಟಿ: PDF ಫೈಲ್ ಇಲ್ಲಿದೆ:

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು