IPL 2021 | ನಿಧಾನಗತಿ ಬೌಲಿಂಗ್; ಕೆಕೆಆರ್ ತಂಡದ ನಾಯಕ ಮಾರ್ಗನ್‌ಗೆ ₹12 ಲಕ್ಷ ದಂಡ

ನವದೆಹಲಿ: ಬುಧವಾರ ಚೆನ್ನೈ ಸೂಪರ್ ಸಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಕೋಲ್ಕತ್ತ ನೈಟ್ ರೈಡರ್ಸ್ ತಂಡ ತನ್ನ ಪಾಲಿನ ಓವರ್‌ಗಳನ್ನು ಪೂರೈಸಲು ನಿಗದಿಗಿಂತಲೂ ಹೆಚ್ಚು ಸಮಯ ತೆಗೆದುಕೊಂಡ ಕಾರಣ ನಾಯಕ ಏಯಾನ್ ಮಾರ್ಗನ್‌ಗೆ ₹12 ಲಕ್ಷ ದಂಡ ವಿಧಿಸಲಾಗಿದೆ.
‘ಐಪಿಎಲ್ ನಿಯಮಾವಳಿ ಪ್ರಕಾರ, ಈ ಆವೃತ್ತಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಮೊದಲ ತಪ್ಪು ಇದಾಗಿದೆ. ಈ ಕಾರಣಕ್ಕಾಗಿ ಮಾರ್ಗನ್ ಅವರಿಗೆ ₹12ಲಕ್ಷ ದಂಡ ವಿಧಿಸಲಾಗಿದೆ’ ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪಂದ್ಯದಲ್ಲಿ ಫಫ್ ಡುಪ್ಲೆಸಿ (95*) ಹಾಗೂ ಋತುರಾಜ್ ಗಾಯಕವಾಡ್ (64) ಶತಕದ ಜೊತೆಯಾಟ ಮತ್ತು ಬಳಿಕ ದೀಪಕ್ ಚಾಹರ್ ನಾಲ್ಕು ವಿಕೆಟ್ ಸಾಧನೆಯ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 18 ರನ್‌ಗಳ ರೋಚಕ ಗೆಲುವು ದಾಖಲಿಸಿತ್ತು.
ಇತ್ತೀಚೆಗೆ ನಿಧಾನಗತಿಯ ಓವರ್ ರೇಟ್‌ಗೆ ಸಂಬಂಧಿಸಿದಂತೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರ ಮೇಲೆ ₹12 ಲಕ್ಷ ದಂಡ ವಿಧಿಸಲಾಗಿತ್ತು. ಮಂಗಳವಾರ ಚೆನ್ನೈನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ತಂಡವು ನಿಗದಿತ ಅವಧಿಯಲ್ಲಿ ಬೌಲಿಂಗ್ ಪೂರ್ಣಗೊಳಿಸುವಲ್ಲಿ ವಿಫಲಗೊಂಡಿತ್ತು.
ಇದನ್ನೂ ಓದಿ... IPL 2021: ಚೆನ್ನೈ ಹ್ಯಾಟ್ರಿಕ್ ಗೆಲುವು, ಅಂಕಪಟ್ಟಿಯಲ್ಲಿ ಅಗ್ರಸ್ಥಾನ
ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.