ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ವಿಶಿಷ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಧೋನಿ

Last Updated 15 ಅಕ್ಟೋಬರ್ 2021, 14:38 IST
ಅಕ್ಷರ ಗಾತ್ರ

ದುಬೈ: ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ, ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ವಿಶಿಷ್ಟ ದಾಖಲೆ ಬರೆದಿದ್ದಾರೆ.

ಟ್ವೆಂಟಿ-20 ಕ್ರಿಕೆಟ್‌ನಲ್ಲಿ 300 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ ವಿಶ್ವದ ಮೊತ್ತ ಮೊದಲ ಆಟಗಾರ ಎಂಬ ಕೀರ್ತಿಗೆ ಧೋನಿ ಭಾಜನರಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ, ದುಬೈಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರೂ ಆಗಿರುವ ಧೋನಿ, ಟ್ವೆಂಟಿ-20 ವಿಶ್ವಕಪ್, ಏಷ್ಯಾ ಕಪ್, ಐಪಿಎಲ್, ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಸೇರಿದಂತೆ ವಿಶ್ವದ ಎಲ್ಲ ಪ್ರಮುಖ ಟೂರ್ನಿಗಳನ್ನು ಗೆದ್ದ ಹಿರಿಮೆಗೆ ಭಾಜನರಾಗಿದ್ದಾರೆ.

ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ವೆಸ್ಟ್‌ಇಂಡೀಸ್‌ನ ಡ್ಯಾರೆನ್ ಸಮಿ, ಟ್ವೆಂಟಿ-20 ಕ್ರಿಕೆಟ್‌ನಲ್ಲಿ 208 ಪಂದ್ಯಗಳಲ್ಲಿ ಕಪ್ತಾನಗಿರಿ ವಹಿಸಿದ್ದಾರೆ. ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 185 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT