ಶುಕ್ರವಾರ, ಮೇ 7, 2021
26 °C

ನಾಯಕನಾಗಿ ಪಂತ್ ಪದಾರ್ಪಣೆ; ಪಂದ್ಯಕ್ಕೂ ಮೊದಲು ಮಹಾನ್ ಆಟಗಾರನ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯಲ್ಲಿ ನಾಯಕರಾಗಿ ರಿಷಭ್ ಪಂತ್ ಪದಾರ್ಪಣೆ ಮಾಡಿದ್ದಾರೆ. ಈ ನಡುವೆ ಪಂದ್ಯಕ್ಕೂ ಮೊದಲು ತಮ್ಮ ಗುರು ಮಹೇಂದ್ರ ಸಿಂಗ್ ಧೋನಿ ಅವರನ್ನು ಭೇಟಿಯಾಗುವ ಮೂಲಕ ಗಮನ ಸೆಳೆದಿದ್ದಾರೆ. 

ಮುಂಬೈನ ವಾಂಖೆಡೆ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ. 

ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ನಾಯಕತ್ವ ಜವಾಬ್ದಾರಿಯನ್ನು ರಿಷಭ್ ಪಂತ್ ವಹಿಸುತ್ತಿದ್ದಾರೆ. ಅಲ್ಲದೆ ಮೊದಲ ಪಂದ್ಯದಲ್ಲೇ ತಮ್ಮ ಗುರು ಮಹೇಂದ್ರ ಸಿಂಗ್ ಧೋನಿ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ. 

ಪಂದ್ಯದ ಮೊದಲು ರಿಷಭ್ ಪಂತ್ ಅವರು ಧೋನಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ವಿಡಿಯೊವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬಿಡುಗಡೆ ಮಾಡಿದೆ. 

ಧೋನಿ ಜೊತೆಗೆ ಸುರೇಶ್ ರೈನಾ ಹಾಗೂ ಚೇತೇಶ್ವರ ಪೂಜಾರ ಅವರನ್ನು ಭೇಟಿಯಾದ ರಿಷಭ್ ಪಂತ್ ಮಾತುಕತೆ ನಡೆಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು