ಮಂಗಳವಾರ, ಅಕ್ಟೋಬರ್ 26, 2021
26 °C

IPL 2021: ಕೊನೆಯ ಎಸೆತದಲ್ಲಿ ಸಿಕ್ಸರ್; ಗಾಯಕವಾಡ್ ಚೊಚ್ಚಲ ಐಪಿಎಲ್ ಶತಕ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ಋತುರಾಜ್ ಗಾಯಕವಾಡ್ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ. 

ಶನಿವಾರ ಶಾರ್ಜಾದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಋತುರಾಜ್, ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಮೂರಂಕಿಯ ಗಡಿ ದಾಟಿದರು. 

ರಾಜಸ್ಥಾನ್ ಬೌಲರ್‌ಗಳನ್ನು ಕಾಡಿದ ಋತುರಾಜ್ ಕೇವಲ 60 ಎಸೆತಗಳಲ್ಲಿ 101 ರನ್ ಗಳಿಸಿ ಔಟಾಗದೆ ಉಳಿದರು. ಅವರ ಈ ಆಕರ್ಷಕ ಇನ್ನಿಂಗ್ಸ್‌ನಲ್ಲಿ ಒಂಬತ್ತು ಬೌಂಡರಿಗಳು ಹಾಗೂ ಐದು ಸಿಕ್ಸರ್‌ಗಳು ಸೇರಿದ್ದವು. 

ಋತುರಾಜ್ ಗಾಯಕವಾಡ್ ಕೊನೆಯ ಐದು ಇನ್ನಿಂಗ್ಸ್‌ಗಳು ಇಂತಿದೆ: 88, 38, 30, 45 ಮತ್ತು 101* 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು