ಮಂಗಳವಾರ, ಅಕ್ಟೋಬರ್ 19, 2021
22 °C

ಧೋನಿ 'ಟೆಸ್ಟ್' ಬ್ಯಾಟ್ಸ್‌ಮನ್‌; ಆಮೆಗತಿ ಬ್ಯಾಟಿಂಗ್‌ಗಾಗಿ ಟ್ರೋಲ್‌ಗೆ ಗುರಿ!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಆಮೆಗತಿ ಬ್ಯಾಟಿಂಗ್ ಮಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟ್ರೋಲ್‌ಗೆ ಗುರಿಯಾಗಿದ್ದಾರೆ. 

ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ ತಂಡವು ಐದು ವಿಕೆಟ್ ನಷ್ಟಕ್ಕೆ 136 ರನ್ ಗಳಿಸಲಷ್ಟೇ ಸಮರ್ಥವಾಯಿತು. 27 ಎಸೆತಗಳನ್ನು ಎದುರಿಸಿದ ಧೋನಿ ಕೇವಲ 18  ರನ್ ಮಾತ್ರ ಗಳಿಸಿದರು. 

ಇದನ್ನೂ ಓದಿ: 

8.3 ಓವರ್‌ಗಳಲ್ಲಿ 62 ರನ್ನಿಗೆ ನಾಲ್ಕು ವಿಕೆಟ್ ಕಳೆದುಕೊಂಡಿದ್ದ ಚೆನ್ನೈ ಹಿನ್ನೆಡೆಗೊಳಗಾಗಿತ್ತು. ಈ ಹಂತದಲ್ಲಿ ಧೋನಿ ಜೊತೆಗೂಡಿದ ಅಂಬಟಿ ರಾಯುಡು ಐದನೇ ವಿಕೆಟ್‌ಗೆ 70 ರನ್‌ಗಳ ಅಮೂಲ್ಯ ಜೊತೆಯಾಟ ಕಟ್ಟಿದರು. 

43 ಎಸೆತಗಳನ್ನು ಎದುರಿಸಿದ ರಾಯುಡು ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 55 ರನ್ ಗಳಿಸಿ ಔಟಾಗದೆ ಉಳಿದರು. 

ಅತ್ತ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ ಧೋನಿ, ಟೀಕೆಗೆ ಒಳಗಾಗಿದ್ದಾರೆ. ಅಲ್ಲದೆ ಒಂದೇ ಒಂದು ಬೌಂಡರಿ ಹಾಗೂ ಅಥವಾ ಸಿಕ್ಸರ್ ಬಾರಿಸಲು ಸಾಧ್ಯವಾಗಲಿಲ್ಲ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು