ಶುಕ್ರವಾರ, ಅಕ್ಟೋಬರ್ 22, 2021
22 °C

IPL 2021: ಶೂನ್ಯಕ್ಕೆ ಔಟ್ ಆಗಿ ಟ್ರೋಲ್‌ಗೆ ಗುರಿಯಾದ ಡೇವಿಡ್ ವಾರ್ನರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಸ್ಥಾನವನ್ನು ಕಳೆದುಕೊಂಡಿರುವ ಡೇವಿಡ್ ವಾರ್ನರ್, ಈಗ ಬ್ಯಾಟಿಂಗ್‌ನಲ್ಲೂ ರನ್ ಬರ ಎದುರಿಸುತ್ತಿದ್ದಾರೆ. 

ಯುಎಇನಲ್ಲಿ ನಡೆಯುತ್ತಿರುವ ಎರಡನೇ ಹಂತದ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಇನ್ನಿಂಗ್ಸ್‌ನ ಪ್ರಥಮ ಓವರ್‌ನಲ್ಲೇ ಎನ್ರಿಚ್ ನಾಕಿಯಾ ದಾಳಿಯಲ್ಲಿ ವಿಕೆಟ್ ಒಪ್ಪಿಸಿ ಖಾತೆ ತೆರೆಯಲಾಗದೇ ಪೆವಿಲಿಯನ್‌ಗೆ ಮರಳಿದರು. 

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಹೈದರಾಬಾದ್ ತಂಡದಿಂದ ಉತ್ತಮ ಪ್ರದರ್ಶನ ನಿರೀಕ್ಷೆ ಮಾಡಲಾಗಿತ್ತು. 

ಆದರೆ ಹೈದರಾಬಾದ್ ಬ್ಯಾಟ್ಸ್‌ಮನ್‌ಗಳು ಸತತ ವೈಫಲ್ಯ ಕಾಣುವುದರೊಂದಿಗೆ ಕಳಪೆ ಫಾರ್ಮ್ ಮುಂದುವರಿದಿದೆ. 

ಕೆಟ್ಟ ಆಟವನ್ನು ಪ್ರದರ್ಶಿಸಿರುವ ಎಡಗೈ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್, ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್‌ಗೆ ಗುರಿಯಾಗಿದ್ದಾರೆ. 

ನಾಯಕತ್ವ ಸ್ಥಾನ ನಷ್ಟವಾಗಿರುವುದು ವಾರ್ನರ್ ಬ್ಯಾಟಿಂಗ್ ಮೇಲೂ ಪ್ರಭಾವ ಬೀರಿದೆ. ಆದರೂ ತಮ್ಮ ನೆಚ್ಚಿನ ಬ್ಯಾಟ್ಸ್‌ಮನ್ ಆದಷ್ಟು ಬೇಗನೇ ಲಯ ಕಂಡುಕೊಳ್ಳುವ ಭರವಸೆಯನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು