ಸೋಮವಾರ, ಅಕ್ಟೋಬರ್ 18, 2021
27 °C

IPL 2021: ಟಿ20 ಕ್ರಿಕೆಟ್‌ನಲ್ಲಿ ಶ್ರೇಯಸ್ ಅಯ್ಯರ್‌ 4,000 ರನ್ ಮೈಲಿಗಲ್ಲು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಭಾರತ ಕ್ರಿಕೆಟ್ ತಂಡದ ಬಲಗೈ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ಟ್ವೆಂಟಿ-20 ಕ್ರಿಕೆಟ್‌ನಲ್ಲಿ 4,000 ರನ್‌ಗಳ ಮೈಲಿಗಲ್ಲು ಕ್ರಮಿಸಿದ್ದಾರೆ. 

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಅಯ್ಯರ್, ನೂತನ ಸಾಧನೆ ಮಾಡಿದರು. 

ಇದನ್ನೂ ಓದಿ: 

ಬುಧವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ಅಯ್ಯರ್, 41 ಎಸೆತಗಳಲ್ಲಿ ತಲಾ ಎರಡು ಬೌಂಡರಿ ಹಾಗೂ ಸಿಕ್ಸರ್‌ಗಳ ನೆರವಿನಿಂದ 47 ರನ್ ಗಳಿಸಿ ಅಜೇಯರಾಗಿ ಉಳಿದರು.  

ಗಾಯಮುಕ್ತರಾದ ಬಳಿಕ ಡೆಲ್ಲಿ ತಂಡವನ್ನು ಸೇರಿರುವ ಅಯ್ಯರ್, ಸಮಯೋಚಿತ ಇನ್ನಿಂಗ್ಸ್ ಕಟ್ಟುವ ಮೂಲಕ ಗಮನ ಸೆಳೆದರು. 

ಈ ಪೈಕಿ ಐಪಿಎಲ್‌ನಲ್ಲಿ 80 ಪಂದ್ಯಗಳನ್ನು ಆಡಿರುವ ಅಯ್ಯರ್ ಒಟ್ಟು 2,247 ರನ್ ಗಳಿಸಿದ್ದಾರೆ.  

ಅತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಮಾನ್ ಸಹಾ, ಐಪಿಎಲ್‌ನಲ್ಲಿ 2,000 ರನ್‌ಗಳ ಮೈಲಿಗಲ್ಲು ತಲುಪಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು