ಶುಕ್ರವಾರ, ಅಕ್ಟೋಬರ್ 22, 2021
21 °C

IPL 2021: ಚೆನ್ನೈ ಬೆನ್ನಲ್ಲೇ ಪ್ಲೇ-ಆಫ್ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸಿರುವ ಎರಡನೇ ತಂಡವೆಂಬ ಹೆಗ್ಗಳಿಕೆಗೆ ಡೆಲ್ಲಿ ಕ್ಯಾಪಿಟಲ್ಸ್ ಪಾತ್ರವಾಗಿದೆ.

ಶುಕ್ರವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗೆಲುವು ದಾಖಲಿಸುವುದರೊಂದಿಗೆ ಡೆಲ್ಲಿ ಪ್ಲೇ-ಆಫ್ ಪ್ರವೇಶವು ಸುಗಮವಾಯಿತು.

ಇದನ್ನೂ ಓದಿ: 

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈಗಾಗಲೇ ಅಂತಿಮ ನಾಲ್ಕರ ಘಟ್ಟವನ್ನು ಪ್ರವೇಶಿಸಿದೆ. ಇನ್ನೊಂದೆಡೆ 11 ಪಂದ್ಯಗಳಲ್ಲಿ ಎಂಟು ಗೆಲುವಿನೊಂದಿಗೆ 16 ಅಂಕಗಳನ್ನು ಸಂಪಾದಿಸಿರುವ ಡೆಲ್ಲಿ, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದೆ.

 

 

 

ರಿಷಭ್ ಪಂತ್ ಬಳಗವು ಶನಿವಾರ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸುತ್ತಿದೆ. ಮುಂಬೈ ಪಾಲಿಗೆ ಈ ಪಂದ್ಯವು ಮಹತ್ವದೆನಿಸಿದೆ.

 

ಸದ್ಯ ರೋಹಿತ್ ಶರ್ಮಾ ಬಳಗವು 11 ಪಂದ್ಯಗಳಲ್ಲಿ 10 ಅಂಕಗಳನ್ನು ಕಲೆ ಹಾಕಿದ್ದು, ಆರನೇ ಸ್ಥಾನದಲ್ಲಿದೆ. 12 ಪಂದ್ಯಗಳಲ್ಲಿ ತಲಾ 10 ಅಂಕಗಳನ್ನು ಹೊಂದಿರುವ ಕೋಲ್ಕತ್ತ ಹಾಗೂ ಪಂಜಾಬ್ ರನ್ ರೇಟ್ ಲೆಕ್ಕಾಚಾರದಲ್ಲಿ ಅನುಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನಗಳನ್ನು ಹಂಚಿಕೊಂಡಿವೆ.

ಅತ್ತ ಮೂರನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 14 ಅಂಕಗಳನ್ನು ಹೊಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು