ಮುಂಬೈ: ಭಾನುವಾರ ರಾತ್ರಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಎರಡೂ ತಂಡಗಳಲ್ಲಿ ಸ್ಫೋಟಕ ಬ್ಯಾಟ್ಸ್ಮನ್ಗಳು ಮತ್ತು ಪರಿಣಾಮಕಾರಿ ಬೌಲರ್ಗಳು ಇರುವುದರಿಂದ ಪಂದ್ಯ ರೋಮಾಂಚಕಾರಿಯಾಗುವ ನಿರೀಕ್ಷೆ ಇದೆ.

ಡೆಲ್ಲಿ ಕ್ಯಾಪಿಟಲ್ಸ್ನ ರಿಷಭ್ ಪಂತ್ ಮತ್ತು ಪಂಜಾಬ್ ತಂಡದ ಕೆ.ಎಲ್.ರಾಹುಲ್ ವಿಕೆಟ್ ಕೀಪಿಂಗ್ ಜೊತೆ ನಾಯಕತ್ವದ ಜವಾಬ್ದಾರಿಯನ್ನೂ ನಿಭಾಯಿಸಬೇಕಾಗಿದ್ದು ಇಬ್ಬರೂ ಆಯಾ ತಂಡದ ಪ್ರಮುಖ ಬ್ಯಾಟ್ಸ್ಮನ್ಗಳು ಕೂಡ ಆಗಿದ್ದಾರೆ. ಎರಡೂ ತಂಡಗಳು ಹಿಂದಿನ ಪಂದ್ಯಗಳಲ್ಲಿ ಸೋತು ಮೂರನೇ ಪಂದ್ಯಕ್ಕೆ ಸಜ್ಜಾಗಿವೆ.

ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲುವಿನ ಹಾದಿಯಲ್ಲಿದ್ದ ಡೆಲ್ಲಿ ಕೊನೆಯ ಓವರ್ನಲ್ಲಿ ಸೋಲಿಗೆ ಶರಣಾಗಿತ್ತು. ಆ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಅವರ ಬೌಲಿಂಗ್ ಕೋಟಾ ಪೂರ್ತಿಗೊಳಿಸದೆ ಟಾಮ್ ಕರನ್ ಅವರಿಂದ ಬೌಲಿಂಗ್ ಮಾಡಿಸಿದ್ದಕ್ಕೆ ತಂಡದ ಕೋಚ್ ರಿಕಿ ಪಾಂಟಿಂಗ್ ಅವರಿಂದಲೇ ಆಕ್ಷೇಪ ವ್ಯಕ್ತವಾಗಿತ್ತು. ಈಗ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಬಲ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾದ ಆ್ಯನ್ರಿಚ್ ನಾರ್ಕಿಯ ತಂಡಕ್ಕೆ ಮರಳಿರುವುದರಿಂದ ಪಂತ್ ಬಳಗದಲ್ಲಿ ವಿಶ್ವಾಸ ಹೆಚ್ಚಾಗಿದೆ.

ಇದನ್ನೂ ಓದಿ:IPL 2021 | RCB vs KKR: ಆರ್ಸಿಬಿಗೆ ಹ್ಯಾಟ್ರಿಕ್ ಜಯದ ಕನಸು

ಪಂಜಾಬ್ ಕಿಂಗ್ಸ್ ಹಿಂದಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯದಿಂದಾಗಿ ಸೋಲಿಗೆ ಶರಣಾಗಿತ್ತು. ದೀಪಕ್ ಚಾಹರ್ ಅವರ ಪರಿಣಾಮಕಾರಿ ದಾಳಿ ಮತ್ತು ರವೀಂದ್ರ ಜಡೇಜ ಅವರ ಮಿಂಚಿನ ಫೀಲ್ಡಿಂಗ್ಗೆ ತಂಡದ ಅಗ್ರ ಕ್ರಮಾಂಕ ಬೇಗನೇ ಪತನಗೊಂಡಿತ್ತು.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕಗಿಸೊ ರಬಾಡ, ಕ್ರಿಸ್ ವೋಕ್ಸ್ ಮುಂತಾದವರ ದಾಳಿಯನ್ನು ರಾಹುಲ್, ಕ್ರಿಸ್ ಗೇಲ್ ಮತ್ತು ದೀಪಕ್ ಹೂಡಾ ಯಾವ ರೀತಿ ಎದುರಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಮೊಹಮ್ಮದ್ ಶಮಿ ಮತ್ತು ಆರ್ಷದೀಪ್ ಸಿಂಗ್ ಅವರ ವಿರುದ್ಧ ಪೃಥ್ವಿ ಶಾ ಮತ್ತು ಶಿಖರ್ ಧವನ್ ಅನುಸರಿಸಲಿರುವ ತಂತ್ರದ ಬಗ್ಗೆಯೂ ಕುತೂಹಲ ಎದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.