ಶನಿವಾರ, ಸೆಪ್ಟೆಂಬರ್ 25, 2021
23 °C

ಐಪಿಎಲ್ 2021: ಇಂಗ್ಲೆಂಡ್‌ನಿಂದ ದುಬೈಗೆ ಬಂದಿಳಿದ ಡೆಲ್ಲಿ ಕ್ಯಾಪಿಟಲ್ಸ್‌ ಆಟಗಾರರು

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯ ಕೋವಿಡ್‌ನಿಂದಾಗಿ ರದ್ದಾದ ಹಿನ್ನೆಲೆಯಲ್ಲಿ ಭಾರತ ತಂಡದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು ಐಪಿಎಲ್‌ ಟೂರ್ನಿಯಲ್ಲಿ ಆಡಲು ದುಬೈಗೆ ಬಂದಿಳಿದಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.

2021ರ ಐಪಿಎಲ್ ಟೂರ್ನಿಯನ್ನು ಕೋವಿಡ್‌ನಿಂದಾಗಿ ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಆದರೆ, ಯುಎಇಯಲ್ಲಿ ಸೆಪ್ಟೆಂಬರ್ 19ರಿಂದ ಟೂರ್ನಿ ಪುನರಾರಂಭವಾಗಲಿದೆ.

ಈ ಹಿನ್ನೆಲ್ಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಆಟಗಾರರಾದ ರಿಷಭ್ ಪಂತ್, ರವಿಚಂದ್ರನ್ ಅಶ್ವಿನ್, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ, ಅಕ್ಷರ್ ಪಟೇಲ್, ಪೃಥ್ವಿ ಶಾ ಮತ್ತು ಉಮೇಶ್ ಯಾದವ್ ದುಬೈಗೆ ತಲುಪಿದ್ದಾರೆ.
 
ಕೋವಿಡ್‌ ಮಾರ್ಗಸೂಚಿಗಳ ಪ್ರಕಾರ ಆಟಗಾರರು ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದರು. ಜತೆಗೆ, ಅವರೆಲ್ಲರೂ ಕುಟುಂಬದವರೊಂದಿಗೆ ಆರು ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ.

ಮುಂಬೈ ಇಂಡಿಯನ್ಸ್‌ ತಂಡದ ಪ್ರಮುಖ ಆಟಗಾರರಾದ ರೋಹಿತ್‌ ಶರ್ಮಾ, ಜಸ್‌ಪ್ರೀತ್‌ ಬೂಮ್ರಾ, ಸೂರ್ಯಕುಮಾರ್ ಯಾದವ್‌ ಐಪಿಎಲ್‌ನಲ್ಲಿ ಕಣಕ್ಕಿಳಿಯಲು ಈಗಾಗಲೇ ದುಬೈಗೆ ತೆರಳಿದ್ದಾರೆ.

ಇದನ್ನೂ ಓದಿ... ದೆಹಲಿಯಲ್ಲಿ ಭಾರಿ ಮಳೆ: ನೀರಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದ ರಾಕೇಶ್ ಟಿಕಾಯತ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು