ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ಗೆ ಕರಿನೆರಳು; ವಾಂಖೆಡೆ ಗ್ರೌಂಡ್ ಸ್ಟಾಫ್‌ಗೆ ಕೋವಿಡ್ ಪಾಸಿಟಿವ್

Last Updated 3 ಏಪ್ರಿಲ್ 2021, 5:55 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕಿನ್ನು ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಉಳಿದಿರುವಂತೆಯೇ ಕಳವಳಕಾರಿ ಸುದ್ದಿಯೊಂದು ಹೊರಬಂದಿದ್ದು, ವಾಂಖೆಡೆ ಮೈದಾನದ ಗ್ರೌಂಡ್‌ಸ್ಟಾಫ್‌ಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಲೀಗ್ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ. ಆದರೂಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಐಪಿಎಲ್ ಆಯೋಜಕರು ನಿರ್ಧರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಐಪಿಎಲ್ ಟೂರ್ನಿಯು ಏಪ್ರಿಲ್ 9ರಂದು ಪ್ರಾರಂಭವಾಗಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಅಧಿಕಾರಿಯೊಬ್ಬರು, ಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದಿದ್ದಾರೆ.

ಪಂದ್ಯಾವಳಿ ಆರಂಭಕ್ಕೂ ಕೆಲವೇ ದಿನಗಳ ಮೊದಲು ಇಂತಹ ಸುದ್ದಿಗಳನ್ನು ಕೇಳಿದಾಗ ಆತಂಕಕ್ಕೆ ಒಳಗಾಗುವುದು ಸಹಜ. ನಾವು ಕಠಿಣ ಕೋವಿಡ್ ಮಾನದಂಡಗಳನ್ನು ಅನುಸರಿಸುತ್ತಿದ್ದೇವೆ. ನಿಸ್ಸಂಶಯವಾಗಿಯೂ ಅಂತಹ ಸುದ್ದಿ ಕೇಳಿದಾಗ ಮತ್ತಷ್ಟು ಎಚ್ಚರಿಕೆ ವಹಿಸುತ್ತೇವೆ. ಪರಿಸ್ಥಿತಿಯನ್ನು ಸಾಧ್ಯವಾದಷ್ಟು ಬಿಗಿಯಾಗಿಡಲು ಪ್ರಯತ್ನಿಸುತ್ತೇವೆ. ನಾವು ರಕ್ಷಣೆ ಒದಗಿಸಬೇಕಿದೆ ಎಂದು ಹೇಳಿದ್ದಾರೆ.

ಮಗದೊಂದು ಫ್ರಾಂಚೈಸಿಯ ಅಧಿಕಾರಿಯು ಪ್ರತಿಕ್ರಿಯಿಸುತ್ತಾ, ಇದು ಎಚ್ಚರಿಕೆಯ ಕರೆಗಂಟೆಯಾಗಿದ್ದು, ಬಯೋಬಬಲ್ ಹೆಚ್ಚು ಸುರಕ್ಷಿತವೆನಿಸಿದರೂ, ಕಠಿಣ ಮಾರ್ಗಸೂಚಿಯನ್ನು ಅನುಸರಿಸಬೇಕಿದೆ ಎಂದಿದ್ದಾರೆ.

ಐಪಿಎಲ್ 2021ನೇ ಆವೃತ್ತಿಯಲ್ಲಿ 10 ಪಂದ್ಯಗಳಿಗೆ ವಾಂಖೆಡೆ ಮೈದಾನವು ಆತಿಥ್ಯ ವಹಿಸಲಿದೆ. ವಾಂಖೆಡೆಯಲ್ಲಿ ಏಪ್ರಿಲ್ 10ರಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮೊದಲ ಹಣಾಹಣಿ ನಡೆಯಲಿದೆ. ಸದ್ಯ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಗಳು ಇಲ್ಲಿ ಬೀಡುಬಿಟ್ಟಿವೆ.

ಏತನ್ಮಧ್ಯೆ ಮಹಾರಾಷ್ಟ್ರದಲ್ಲಿ ಶುಕ್ರವಾರದಂದು 47,827 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿತ್ತು. ಅಲ್ಲದೆ 202 ಮಂದಿ ಮೃತಪಟ್ಟಿದ್ದರು. ಈ ಪೈಕಿ ಮುಂಬೈನಲ್ಲಿ ಮಾತ್ರವಾಗಿ 8,832 ಸೋಂಕು ಪ್ರಕರಣಗಳು ದಾಖಲಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT