ಗುರುವಾರ , ಅಕ್ಟೋಬರ್ 21, 2021
24 °C

IPL 2021: ಆತ್ಮವಿಶ್ವಾಸ ತುಂಬಿದ ವಿರಾಟ್; ಲಯಕ್ಕೆ ಮರಳಿ ಕಿಶನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 25 ಎಸೆತಗಳಲ್ಲಿ ಅಜೇಯ ಅರ್ಧಶತಕ ಬಾರಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅಮೋಘ ಲಯಕ್ಕೆ ಮರಳಿದ್ದಾರೆ.

ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯಿಸಿರುವ ಇಶಾನ್, ಆತ್ಮವಿಶ್ವಾಸ ಮರಳಿ ಪಡೆಯುವಲ್ಲಿ ವಿರಾಟ್ ಕೊಹ್ಲಿ ನೆರವಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತಾಶರಾದ ಇಶಾನ್ ಹೆಗಲ ಮೇಲೆ ಕೈ ಇಟ್ಟು ಧೈರ್ಯ ತುಂಬಿದ ಕೊಹ್ಲಿ

'ಆರಂಭಿಕನಾಗಿ ಕ್ರೀಸಿಗಿಳಿದು ರನ್ ಗಳಿಸಲು ಸಾಧ್ಯವಾಗಿರುವುದು ಉತ್ತಮ ಭಾವನೆಯನ್ನುಂಟು ಮಾಡಿದೆ. ಮೊದಲು ಫೀಲ್ಡಿಂಗ್ ಮಾಡಿದ್ದರಿಂದ ವಿಕೆಟ್ ವರ್ತನೆಯ ಬಗ್ಗೆ ಅಂದಾಜಿಸಲು ಸಾಧ್ಯವಾಯಿತು. ಕ್ರೀಡಾಪಟುವಿನ ಜೀವನದಲ್ಲಿ ಏಳು-ಬೀಳುಗಳು ಸಹಜ' ಎಂದು ಹೇಳಿದ್ದಾರೆ.

'ಸತತ ವೈಫಲ್ಯಗಳ ಬಳಿಕ ನಾನು ವಿರಾಟ್ ಭಾಯ್, ಹಾರ್ದಿಕ್ ಭಾಯ್ (ಹಾರ್ದಿಕ್ ಪಾಂಡ್ಯ) ಹಾಗೂ ಕೆ.ಪಿ (ಕೀರನ್ ಪೊಲಾರ್ಡ್) ಅವರಲ್ಲಿ ಸಮಾಲೋಚನೆ ನಡೆಸಿದ್ದೇನೆ. ಅವರೆಲ್ಲರು ನನಗೆ ಆತ್ಮವಿಶ್ವಾಸವನ್ನು ತುಂಬಿದರು. ವಿಷಯವನ್ನು ಸರಳವಾಗಿಟ್ಟುಕೊಂಡು ಮುಂದಿನ ಪಂದ್ಯದತ್ತ ಗಮನಹರಿಸಲು ಸೂಚಿಸಿದರು. ಆತ್ಮವಿಶ್ವಾಸ ಮರಳಿ ಪಡೆಯಲು ನನ್ನ ಹಳೆಯ ವಿಡಿಯೊಗಳನ್ನು ವೀಕ್ಷಿಸಿದ್ದೇನೆ' ಎಂದು ವಿವರಿಸಿದರು.

ಏತನ್ಮಧ್ಯೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ಮುಂಬೈ ಇಂಡಿಯನ್ಸ್, ಪ್ಲೇ-ಆಫ್ ಕನಸು ಜೀವಂತವಾಗಿದೆ.

ಇಶಾನ್ ಕಿಶನ್, ಮುಂಬರುವ ಟ್ವೆಂಟಿ-20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾದ ಸದಸ್ಯರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು