ಸೋಮವಾರ, ಅಕ್ಟೋಬರ್ 18, 2021
23 °C

ಕಳೆದ ವರ್ಷ ಐಪಿಎಲ್‌ನಲ್ಲಿ ಕೆಟ್ಟ ನಿರ್ವಹಣೆಯನ್ನು ಒಪ್ಪಿಕೊಂಡ ಮ್ಯಾಕ್ಸ್‌ವೆಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಕಳೆದ ವರ್ಷ ಐಪಿಎಲ್‌ನಲ್ಲಿ ಕೆಟ್ಟ ನಿರ್ವಹಣೆಯನ್ನು ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಒಪ್ಪಿಕೊಂಡಿದ್ದಾರೆ.

ಪ್ರಸಕ್ತ ಸಾಲಿನ ಐಪಿಎಲ್‌ ಟೂರ್ನಿಯಲ್ಲಿ ಸತತ ಮೂರು ಅರ್ಧಶತಕಗಳನ್ನು ಗಳಿಸಿರುವ ಮ್ಯಾಕ್ಸ್‌ವೆಲ್, ಆರ್‌ಬಿಸಿ ಪ್ಲೇ-ಆಫ್‌ ಹಂತಕ್ಕೆ ಪ್ರವೇಶಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ಇದನ್ನೂ ಓದಿ: 

'ಕಳೆದೆರಡು ವರ್ಷಗಳಲ್ಲಿ ಐಪಿಎಲ್ ಹೊರತಾಗಿ ವೃತ್ತಿಪರ ಕ್ರಿಕೆಟ್‌ನಲ್ಲಿ ಯಶಸ್ಸನ್ನು ಗಳಿಸಿದ್ದೇನೆ. ಆದರೆ ನನಗೆ ಗೊತ್ತು, ಕಳೆದ ವರ್ಷ ಐಪಿಎಲ್‌ನಲ್ಲಿ ವೈಫಲ್ಯವನ್ನು ಅನುಭವಿಸಿದ್ದೆ' ಎಂದು ಹೇಳಿದ್ದಾರೆ.

 

 

 

2020ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸಿದ್ದ ಮ್ಯಾಕ್ಸ್‌ವೆಲ್‌ಗೆ 11 ಇನ್ನಿಂಗ್ಸ್‌ಗಳಲ್ಲಿ 108 ರನ್‌ ಗಳಿಸಲಷ್ಟೇ ಸಾಧ್ಯವಾಗಿತ್ತು. ಆದರೆ 2021ರಲ್ಲಿ ಈಗಾಗಲೇ 400 ರನ್‌ಗಳ ಗಡಿ ದಾಟಿದ್ದಾರೆ.

 

2021ರ ಐಪಿಎಲ್ ಹರಾಜಿನಲ್ಲಿ ಬರೋಬ್ಬರಿ ₹14.25 ಕೋಟಿಗೆ ಮ್ಯಾಕ್ಸ್‌ವೆಲ್ ಅವರನ್ನು ಆರ್‌ಸಿಬಿ ಫ್ರಾಂಚೈಸಿಯು ಖರೀದಿಸಿತ್ತು. ಅಲ್ಲಿಂದ ಬಳಿಕ ಮ್ಯಾಕ್ಸ್‌ವೆಲ್ ಅಮೋಘ ಲಯದಲ್ಲಿದ್ದಾರೆ. 

ಮಧ್ಯಮ ಕ್ರಮಾಂಕದಲ್ಲಿ ತಮಗೆ ನೀಡಿರುವ ಜವಾಬ್ದಾರಿ ಕುರಿತು ಪ್ರತಿಕ್ರಿಯಿಸಿದ ಅವರು, 'ಆಸ್ಟ್ರೇಲಿಯಾ ಪರ ಇದೇ ಹೊಣೆ ವಹಿಸುತ್ತೇನೆ. ಇದು ಐಪಿಎಲ್‌ನಲ್ಲೂ ಉತ್ತಮ ಪ್ರದರ್ಶನ ನೀಡಲು ನೆರವಾಗಿದೆ' ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು