ಬುಧವಾರ, ಅಕ್ಟೋಬರ್ 20, 2021
29 °C

IPL 2021: ಐಪಿಎಲ್‌ಗೆ ಅಲಭ್ಯರಾದ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ!

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳು ಭಾನುವಾರದಿಂದ (ಇಂದು) ಆರಂಭವಾಗುತ್ತಿದ್ದು, ಬಹುತೇಕ ಎಲ್ಲ ತಂಡಗಳು ಕೆಲವು ಸ್ಟಾರ್ ಆಟಗಾರರ ಅನುಪಸ್ಥಿತಿಯನ್ನು ಎದುರಿಸುತ್ತಿದೆ.

ಈ ಪೈಕಿ ಕೆಲವು ಆಟಗಾರರು ಗಾಯದಿಂದಾಗಿ ಅಲಭ್ಯರಾದರೆ ಇನ್ನು ಕೆಲವರು ಟೂರ್ನಿಯಿಂದಲೇ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: 

ಪ್ರಮುಖವಾಗಿಯೂ ರಾಜಸ್ಥಾನ್ ರಾಯಲ್ಸ್ ಅತಿ ಹೆಚ್ಚು ಆಘಾತಕ್ಕೊಳಗಾಗಿದೆ. ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಮತ್ತು ವೇಗದ ಬೌಲರ್ ಜೋಫ್ರಾ ಆರ್ಚರ್ ಸೇವೆಯಿಂದ ವಂಚಿತವಾಗಿದೆ. ಇವರೆಲ್ಲರೂ ಇಂಗ್ಲೆಂಡ್ ತಂಡದ ಆಟಗಾರರಾಗಿದ್ದಾರೆ.

ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಆಸ್ಟ್ರೇಲಿಯಾದ ಬಲಗೈ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯು ಕಾಡಲಿದೆ.

ಇಂಗ್ಲೆಂಡ್‌ನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಾನಿ ಬೆಸ್ಟೊ ಯುಎಇನಲ್ಲಿ ನಡೆಯಲಿರುವ ಐಪಿಎಲ್ ಎರಡನೇ ಅವಧಿಯ ಟೂರ್ನಿಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಇದರಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಹಿನ್ನಡೆಯಾಗಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕ್ರಿಸ್ ವೋಕ್ಸ್ ಅನುಪಸ್ಥಿತಿಯನ್ನು ಎದುರಿಸಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಜೇ ರಿಚರ್ಡ್ಸನ್ ಹಾಗೂ ಡೇವಿಡ್‌ ಮಲಾನ್ ಅಲಭ್ಯರಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೂ ಪ್ರಮುಖ ಆಟಗಾರರ ಅನುಪಸ್ಥಿತಿ ಕಾಡಲಿದೆ. ಇವರಲ್ಲಿ ವಾಷಿಂಗ್ಟನ್ ಸುಂದರ್, ಕೇನ್ ರಿಚರ್ಡ್ಸನ್ ಹಾಗೂ ಆ್ಯಡಂ ಜಂಪಾ ಪ್ರಮುಖರಾಗಿದ್ದಾರೆ. ಆದರೂ ಶ್ರೀಲಂಕಾದ ವನಿಂದು ಹಸರಂಗ ಮತ್ತು ದುಷ್ಮಂತ ಚಮೀರ ಸೇರ್ಪಡೆಯೊಂದಿಗೆ ಬಲವೃದ್ಧಿಸಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು