ಸೋಮವಾರ, ಮೇ 23, 2022
30 °C

IPL 2021: ಮುಂದುವರಿದ ಧೋನಿ, ರೈನಾ ವೈಫಲ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಸುರೇಶ್ ರೈನಾ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರಿದಿದೆ. 

ಕೋವಿಡ್‌ನಿಂದಾಗಿ ಐಪಿಎಲ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿತ್ತು. ಆದರೆ ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಧೋನಿ ಹಾಗೂ ರೈನಾಗೆ ಮಿಂಚಲಾಗಲಿಲ್ಲ. 

ಆರಂಭದಲ್ಲೇ ಆಘಾತ ಎದುರಿಸಿದ ಚೆನ್ನೈಗೆ ಅನುಭವಿ ಆಟಗಾರರಾದ ಧೋನಿ ಹಾಗೂ ರೈನಾ ನೆರವಾಗುವ ಭರವಸೆಯಿತ್ತು. ಆದರೆ ಬೇಗನೇ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. 

ರೈನಾ 4 ಹಾಗೂ ಧೋನಿ 3 ರನ್ ಗಳಿಸಿ ಔಟಾದರು. ಈ ಎರಡು ವಿಕೆಟ್‌‌ಗಳನ್ನು ಟ್ರೆಂಟ್ ಬೌಲ್ಟ್ ಹಾಗೂ ಆ್ಯಡಂ ಮಿಲ್ನೆ ಹಂಚಿಕೊಂಡರು. 

ಭಾರತದಲ್ಲಿ ನಡೆದ ಮೊದಲ ಹಂತದ ಪಂದ್ಯಗಳಲ್ಲೂ ಧೋನಿ ಹಾಗೂ ರೈನಾ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಪ್ರಮುಖ ಆಟಗಾರರ ವೈಫಲ್ಯದಿಂದಾಗಿ ಚೆನ್ನೈ ತಂಡವು ಹೆಚ್ಚಿನ ಒತ್ತಡಕ್ಕೊಳಗಾಗಿದೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು