ಗುರುವಾರ , ಮೇ 13, 2021
18 °C

IPL 2021: ಸದ್ದಿಲ್ಲದೆ ಧೋನಿ ದಾಖಲೆ ಮುರಿದ ಹಿಟ್‌ಮ್ಯಾನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಕಪ್ತಾನ ರೋಹಿತ್ ಶರ್ಮಾ ಮುರಿದಿದ್ದಾರೆ. 

ಶನಿವಾರದಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ  ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್, ಈ ದಾಖಲೆ ಬರೆದಿದ್ದಾರೆ. ಈ ಪಂದ್ಯಕ್ಕೂ ಮುನ್ನ ಧೋನಿ ದಾಖಲೆ ಮುರಿಯಲು ರೋಹಿತ್‌ಗೆ ಕೇವಲ ಎರಡು ಸಿಕ್ಸರ್‌ಗಳ ಅಗತ್ಯವಿತ್ತು. 

25 ಎಸೆತಗಳನ್ನು ಎದುರಿಸಿದ್ದ ರೋಹಿತ್ ತಲಾ ಎರಡು ಬೌಂಡರಿ ಹಾಗೂ ಸಿಕ್ಸರ್‌ಗಳ ನೆರವಿನಿಂದ 32 ರನ್ ಗಳಿಸಿದ್ದರು. 

ಇದರೊಂದಿಗೆ ಐಪಿಎಲ್‌ನಲ್ಲಿ ರೋಹಿತ್ ಸಿಕ್ಸರ್‌ಗಳ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಮೂಲಕ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೆ ಜಿಗಿದಿದ್ದಾರೆ. 

ಅತ್ತ ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನಲ್ಲಿ 216 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ 201 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. 

ಒಟ್ಟಾರೆ ಪಟ್ಟಿಯನ್ನು ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್ ಮುನ್ನಡೆಸುತ್ತಿದ್ದು, ಎಬಿ ಡಿ ವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಇವರಿಬ್ಬರು ಅನುಕ್ರಮವಾಗಿ 351 ಹಾಗೂ 237 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. 

ಕಳೆದ ಪಂದ್ಯದಲ್ಲಷ್ಟೇ ಮುಂಬೈ ಇಂಡಿಯನ್ಸ್ ತಂಡದ ಕೀರಾನ್ ಪೊಲಾರ್ಡ್, ಐಪಿಎಲ್‌ನಲ್ಲಿ 200 ಸಿಕ್ಸರ್‌ಗಳ ಮೈಲಿಗಲ್ಲು ತಲುಪಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು