ದುಬೈ: 'ಕ್ಯಾಪ್ಟನ್ ಕೂಲ್' ಎಂದೇ ಜನಪ್ರಿಯಗೊಂಡಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ.

ಯುಎಇನಲ್ಲಿ ಆರಂಭವಾಗಲಿರುವ ಐಪಿಎಲ್ 14ನೇ ಆವೃತ್ತಿಯ ದ್ವಿತೀಯಾರ್ಧದಲ್ಲಿಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಇದನ್ನೂ ಓದಿ:IPL 2021: ದಾಖಲೆಯ ಹೊಸ್ತಿಲಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾ

ಅಂತರರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಘೋಷಿಸಿರುವ ಮಹಿ ಆಟವನ್ನು ವೀಕ್ಷಿಸಲು ಕಾಯುತ್ತಿರುವ ಅಭಿಮಾನಿಗಳ ಪಾಲಿಗಿದು ಸಂಭ್ರಮದ ಕ್ಷಣವಾಗಿದೆ.

ಈ ನಡುವೆ ಅಭ್ಯಾಸ ಪಂದ್ಯದಲ್ಲಿ ಧೋನಿ ಸಿಕ್ಸರ್‌ಗಳ ಸುರಿಮಳೆಗೈಯುವ ಮೂಲಕ ಅಬ್ಬರಿಸಿದ್ದಾರೆ. ಅಲ್ಲದೆ ಎದುರಾಳಿಗಳಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಂಚಿಕೊಂಡಿದೆ.

ಭಾನುವಾರ ದುಬೈಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರೋಹಿತ್ ಶರ್ಮಾಮುಂದಾಳತ್ವದ ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ.

ಭಾರತದಲ್ಲಿ ನಡೆದ ಐಪಿಎಲ್ ಮೊದಲಾರ್ಧದಲ್ಲಿ ಮುಂಬೈ ವಿರುದ್ಧ ಸೋತಿರುವ ಚೆನ್ನೈ ಈಗ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಧೋನಿ ಕೂಡ ಉತ್ತಮ ಲಯ ಕಾಪಾಡಿಕೊಂಡಿರುವುದು ತಂಡದ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ.

ಕಳೆದ ವರ್ಷ ಯುಎಇನಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಕೆಟ್ಟ ಪ್ರದರ್ಶನ ನೀಡಿರುವ ಸಿಎಸ್‌ಕೆ, ಈ ಬಾರಿ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಅಲ್ಲದೆ ಏಳು ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅತ್ತ ಮುಂಬೈ ನಾಲ್ಕನೇ ಸ್ಥಾನದಲ್ಲಿದೆ. ಒಟ್ಟಿನಲ್ಲಿ ರೋಚಕ ಕದನವನ್ನು ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.