ಬುಧವಾರ, ಮೇ 12, 2021
20 °C

IPL 2021: ಸಿಎಸ್‌ಕೆ ಕಪ್ತಾನ ಧೋನಿ ಮಗದೊಂದು ಮೈಲಿಗಲ್ಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಗದೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಿಎಸ್‌ಕೆ ಪರ 200 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ ದಾಖಲೆ ಬರೆದಿದ್ದಾರೆ. 

ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಧೋನಿ ಈ ಮೈಲಿಗಲ್ಲು ತಲುಪಿದ್ದಾರೆ. 

ಇದರೊಂದಿಗೆ ಧೋನಿ ಪಾಲಿಗೆ ಪ್ರತಿಯೊಂದು ಪಂದ್ಯವೂ ಸ್ಮರಣೀಯವೆನಿಸಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡವು ಎಂಟು ಬಾರಿ ಐಪಿಎಲ್ ಫೈನಲ್ ಪ್ರವೇಶ ಸಾಧನೆ ಮಾಡಿದ್ದು, ಮೂರು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 

ಕಳೆದ ವರ್ಷ ದುಬೈನಲ್ಲಿ ನಡೆದ ಟೂರ್ನಿಯಲ್ಲಿ ಸಿಎಸ್‌ಕೆ ತಂಡವು ಏಳನೇ ತೃಪ್ತಿಪಟ್ಟುಕೊಂಡಿತ್ತು. ಆದರೆ ಈ ಬಾರಿ ಆಡಿರುವ ಎರಡು ಪಂದ್ಯಗಳಲ್ಲಿ ಒಂದು ಗೆಲುವನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದೆ. 

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಧೋನಿ, ಐಪಿಎಲ್‌ನಲ್ಲಿ ಮಾತ್ರ ತಮ್ಮ ಸೇವೆಯನ್ನು ಮುಂದುವರಿಸಿದ್ದಾರೆ. ಹಾಗಾಗಿ ಇದು ಕೊನೆಯ ಐಪಿಎಲ್ ಆಗಿರಬಹುದೇ ಎಂಬುದನ್ನು ಕಾದು ನೋಡಬೇಕಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು