ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021: ಚೆನ್ನೈ ಕ್ಯಾಂಪ್‌ನಲ್ಲಿ ಧೋನಿ-ರೈನಾ ಜೋಡಿಯ ಮೋಡಿ

Last Updated 1 ಏಪ್ರಿಲ್ 2021, 8:19 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕಿನ್ನು ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಉಳಿದಿರುವಂತೆಯೇ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಸುರೇಶ್ ರೈನಾ ಕಠಿಣ ಅಭ್ಯಾಸದಲ್ಲಿ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದಾರೆ.

ಐಪಿಎಲ್‌ನಲ್ಲಿ ಚೆನ್ನೈ ತಂಡದ ಅವಿಭಾಜ್ಯ ಅಂಗವಾಗಿರುವ ಮಹಿ ಹಾಗೂ ರೈನಾ, ಜೊತೆಯಾಗಿ ಕಸರತ್ತನ್ನು ನಡೆಸಿದ್ದಾರೆ. ಈ ಕುರಿತು ಸಿಎಸ್‌ಕೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೊ ಹಾಗೂ ಚಿತ್ರಗಳನ್ನು ಹಂಚಿಕೊಂಡಿದೆ.

ಹಿಂದೆ ಭಾರತ ತಂಡವನ್ನು ಪ್ರತಿನಿಧಿಸಿ ಅನೇಕ ಸ್ಮರಣೀಯ ಗೆಲುವುಗಳನ್ನು ಒದಗಿಸಿಕೊಟ್ಟಿರುವ ಧೋನಿ-ರೈನಾ, ಜೊತೆ ಜೊತೆಯಾಗಿ ಅಂತರರಾಷ್ಟ್ರೀಯ ಸೀಮಿತ ಓವರ್‌ಗಳಕ್ರಿಕೆಟ್‌ಗೆ 'ಗುಡ್ ಬೈ' ಹಾಡಿದ್ದರು. ಆದರೂ ಐಪಿಎ‌ಲ್‌ನಲ್ಲಿ ಚೆನ್ನೈ ಪರ ತಮ್ಮ ಸೇವೆಯನ್ನು ಮುಂದುವರಿಸಿದ್ದಾರೆ.

ಮೂರು ಬಾರಿಯ ಚಾಂಪಿಯನ್ ಚೆನ್ನೈ, ಕಳೆದ ಬಾರಿ ಏಳನೇ ಸ್ಥಾನಕ್ಕೆ ಕುಸಿದಿತ್ತು. ವೈಯಕ್ತಿಕ ಕಾರಣಗಳಿಂದಾಗಿ ರೈನಾ ಕಳೆದ ವರ್ಷ ಯುಎಇನಲ್ಲಿ ನಡೆದ ಟೂರ್ನಿಯಲ್ಲಿ ಭಾಗವಹಿಸಿರಲಿಲ್ಲ. ಆದರೆ ತವರಿನಲ್ಲಿ ನಡೆಯಲಿರುವ ಪ್ರಸಕ್ತ ಸಾಲಿನ ಟೂರ್ನಿಯಲ್ಲಿ ಚೆನ್ನೈ ತಂಡವು ಮತ್ತೆ ಹಳೆಯ ವೈಭವಕ್ಕೆ ಮರಳುವ ನಿರೀಕ್ಷೆಯಲ್ಲಿದೆ.

ಈ ಬಾರಿಯ ಐಪಿಎಲ್ ಏಪ್ರಿಲ್ 9ರಂದು ಆರಂಭವಾಗಲಿದ್ದು, ಒಟ್ಟು ಆರು ತಾಣಗಳಲ್ಲಿ ಮುಚ್ಚಿದ ಕ್ರೀಡಾಂಗಣದಲ್ಲಿ ಟೂರ್ನಿ ಆಯೋಜನೆಯಾಗಲಿದೆ. ಚೆನ್ನೈ ತಂಡವು ತನ್ನ ಮೊದಲ ಹಣಾಹಣಿಯಲ್ಲಿ ಏಪ್ರಿಲ್ 10ರಂದು ವಾಂಖೆಡೆ ಮೈದಾನದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸವಾಲನ್ನು ಎದುರಿಸಲಿದೆ.

ಐಪಿಎಲ್‌ನಲ್ಲಿ ಸಿಎಸ್‌ಕೆ ಚಾಂಪಿಯನ್ ಆದ ವರ್ಷಗಳು: 2010, 2011, 2018

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT