ಮಂಗಳವಾರ, ಮಾರ್ಚ್ 28, 2023
23 °C

IPL 2021: ದುಬೈ ತಲುಪಿದ ರೋಹಿತ್ ಶರ್ಮಾ, ಜಸ್‌ಪ್ರೀತ್ ಬೂಮ್ರಾ, ಯಾದವ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಕೋವಿಡ್‌ನಿಂದಾಗಿ ರದ್ದಾದ ಬೆನ್ನಲ್ಲೇ, ಮುಂಬೈ ಇಂಡಿಯನ್ಸ್‌ ತಂಡದ ಪ್ರಮುಖ ಆಟಗಾರರಾದ ರೋಹಿತ್‌ ಶರ್ಮಾ, ಜಸ್‌ಪ್ರೀತ್‌ ಬೂಮ್ರಾ, ಸೂರ್ಯಕುಮಾರ್ ಯಾದವ್‌ ಐಪಿಎಲ್‌ನಲ್ಲಿ ಕಣಕ್ಕಿಳಿಯಲು ದುಬೈಗೆ ತೆರಳಿದ್ದಾರೆ.

ಕೋವಿಡ್‌ ಮಾರ್ಗಸೂಚಿಗಳ ಪ್ರಕಾರ ಮೂವರು ಆಟಗಾರರು ತಮ್ಮ ಕುಟುಂಬದವರೊಂದಿಗೆ ಆರು ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ.

‘ಎಲ್ಲಾ ಆಟಗಾರರು ನಿರ್ಗಮನಕ್ಕೂ ಮುನ್ನ ನೆಗೆಟಿವ್‌ ಆರ್‌ಟಿ–ಪಿಸಿಆರ್‌ ವರದಿಯನ್ನು ಸಲ್ಲಿಸಿದ್ದರು. ಜತೆಗೆ, ಅಬುಧಾಬಿಗೆ ತಲುಪಿದ ನಂತರ ಹೊಸ ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ವರದಿಗಳು ನೆಗೆಟಿವ್‌ ಬಂದಿವೆ’ ಎಂದು ಫ್ರಾಂಚೈಸಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಅವರು ಶೀಘ್ರವೇ ಯುಎಇಗೆ ತೆರಳಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು