ಶುಕ್ರವಾರ, ಮೇ 7, 2021
26 °C

IPL 2021: 4,4,4,4,0,4: ಗೇಲ್‌ಗೆ ಸತತ 6 ಬೌಂಡರಿ ಬಾರಿಸುವ ಅವಕಾಶ ಮಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಕಳೆದ ದಿನವಷ್ಟೇ ಓವರ್‌ವೊಂದರ ಎಲ್ಲ ಆರು ಎಸೆತಗಳಲ್ಲಿ ಬೌಂಡರಿ ಬಾರಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ ದಾಖಲೆ ಬರೆದಿದ್ದರು. ಈಗ ಆ ದಾಖಲೆ ಸರಿಗಟ್ಟುವ ಅಪೂರ್ವ ಅವಕಾಶವನ್ನು ಪಂಜಾಬ್ ಕಿಂಗ್ಸ್ ತಂಡದ ಕ್ರಿಸ್ ಗೇಲ್ ಸ್ವಲ್ಪದರಲ್ಲೇ ಮಿಸ್ ಮಾಡಿಕೊಂಡಿದ್ದಾರೆ. 

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅಬ್ಬರಿಸಿದರು. 

ತನ್ನ ಹಳೆಯ ತಂಡದ ವಿರುದ್ಧವೇ ಗೇಲ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಕೈಲ್ ಜೆಮಿಸನ್ ಎಸೆದ ಓವರ್‌ವೊಂದರಲ್ಲಿ ಐದು ಬೌಂಡರಿಗಳ ನೆರವಿನಿಂದ ಒಟ್ಟು 20 ರನ್‌ಗಳನ್ನು ಸೊರೈಗೈದರು. ಇದರಲ್ಲಿ ಸತತ ನಾಲ್ಕು ಬೌಂಡರಿಗಳು ಸೇರಿದ್ದವು. ಐದನೇ ಎಸೆತದಲ್ಲಿ ರನ್ ಗಳಿಸಲು ವಿಫಲವಾದರೂ ಅಂತಿಮ ಎಸೆತದಲ್ಲಿ ಮಗದೊಂದು ಬೌಂಡರಿ ಬಾರಿಸಿ ಅಬ್ಬರಿಸಿದರು. 

ವೆಸ್ಟ್‌ಇಂಡೀಸ್‌ನ ದೈತ್ಯ ಕ್ರಿಸ್ ಗೇಲ್, ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಅವರೊಂದಿಗೆ ಮಹತ್ವದ ಅರ್ಧಶತಕದ ಜೊತೆಯಾಟದಲ್ಲಿ ಭಾಗಿಯಾದರು. 

ಅಂತಿಮವಾಗಿ 46 ರನ್ ಗಳಿಸಿ ಔಟ್ ಆದ ಗೇಲ್, ಕೇವಲ ನಾಲ್ಕು ರನ್ ಅಂತರದಿಂದ ಅರ್ಧಶತಕ ಮಿಸ್ ಮಾಡಿಕೊಂಡರು. 

24 ಎಸೆತಗಳನ್ನು ಎದುರಿಸಿದ ಗೇಲ್  ಇನ್ನಿಂಗ್ಸ್‌ನಲ್ಲಿ ಆರು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳು ಸೇರಿದ್ದವು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು