ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021: ಅಂಕಪಟ್ಟಿ ಹಾಗೂ ಆರ್‌ಸಿಬಿ ಪ್ಲೇ-ಆಫ್ ಲೆಕ್ಕಾಚಾರ!

Last Updated 1 ಅಕ್ಟೋಬರ್ 2021, 15:10 IST
ಅಕ್ಷರ ಗಾತ್ರ

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಕಿರೀಟವನ್ನು ಎದುರು ನೋಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪ್ಲೇ-ಆಫ್ ಪ್ರವೇಶದತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ.

ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ದಾಖಲಿಸಿರುವ ವಿರಾಟ್ ಕೊಹ್ಲಿ ಬಳಗವು, ಒಟ್ಟು 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಈಗಿನ ಲೆಕ್ಕಾಚಾರದ ಪ್ರಕಾರ, ಉಳಿದಿರುವ ಮೂರು ಪಂದ್ಯಗಳಲ್ಲಿ ಕನಿಷ್ಠ ಒಂದು ಗೆಲುವು ದಾಖಲಿಸಿದರೂ ಅಂತಿಮ ನಾಲ್ಕರ ಘಟ್ಟ ಪ್ರವೇಶವು ಬಹುತೇಕ ಸಾಧ್ಯವಾಗಲಿದೆ ಎಂದೇ ಅಂದಾಜಿಸಲಾಗಿದೆ.

ಆದರೂ ಎಲ್ಲ ಮೂರು ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳಲ್ಲಿ ಗುರುತಿಸಿಕೊಳ್ಳುವುದು ಆರ್‌ಸಿಬಿ ಗುರಿಯಾಗಿರಲಿದೆ.

ಯಾಕೆಂದರೆಅಗ್ರ ಎರಡು ತಂಡಗಳಿಗೆ ಫೈನಲ್ ಪ್ರವೇಶಿಸಲು ಎರಡು ಅವಕಾಶಗಳಿರುತ್ತವೆ. ಮೊದಲ ಕ್ವಾಲಿಫೈಯರ್‌ನಲ್ಲಿ ಸೋತರೂ ಎರಡನೇ ಕ್ವಾಲಿಫೈಯರ್‌‌ನಲ್ಲಿ ಗೆದ್ದು ಪ್ರಶಸ್ತಿ ಸುತ್ತಿಗೆ ಪ್ರವೇಶಿಸಬಹುದಾಗಿದೆ.

ಲೀಗ್ ಹಂತದಲ್ಲಿ ಆರ್‌ಸಿಬಿ ಕೊನೆಯ ಮೂರು ಪಂದ್ಯಗಳಲ್ಲಿ ಅನುಕ್ರಮವಾಗಿ ಪಂಜಾಬ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸವಾಲುಗಳನ್ನು ಎದುರಿಸಲಿವೆ. ಹಾಗಾಗಿ ಪ್ರತಿಯೊಂದು ಪಂದ್ಯವು ಮುಖ್ಯವೆನಿಸಿದೆ.

ಆರ್‌ಸಿಬಿಯ ಕೊನೆಯ ಮೂರು ಪಂದ್ಯಗಳ ವೇಳಾಪಟ್ಟಿ ಇಂತಿದೆ:
ಅ. 3, ಭಾನುವಾರ: ಪಂಜಾಬ್ ಕಿಂಗ್ಸ್ ವಿರುದ್ಧ, ಶಾರ್ಜಾ, ಸಂಜೆ 3.30ಕ್ಕೆ
ಅ. 6, ಬುಧವಾರ: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ, ದುಬೈ,ರಾತ್ರಿ 7.30ಕ್ಕೆ
ಅ. 8, ಶುಕ್ರವಾರ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ, ದುಬೈ,ರಾತ್ರಿ 7.30ಕ್ಕೆ

ಪಂದ್ಯ ಸಂಖ್ಯೆ 44ರ ಅಂತ್ಯಕ್ಕೆ ಅಂಕಪಟ್ಟಿ ಇಂತಿದೆ:

ಚಿತ್ರ ಕೃಪೆ: ಐಪಿಎಲ್
ಚಿತ್ರ ಕೃಪೆ: ಐಪಿಎಲ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT