ಗುರುವಾರ , ಅಕ್ಟೋಬರ್ 28, 2021
18 °C

PBKS vs RR: ರಾಯಲ್ಸ್‌ ವಿರುದ್ಧ ಟಾಸ್‌ ಗೆದ್ದ ಕಿಂಗ್ಸ್‌, ಬೌಲಿಂಗ್‌ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯ 32ನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಪಂಜಾಬ್ ಕಿಂಗ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸಲಿವೆ.

ಸದ್ಯ ರಾಜಸ್ಥಾನ್‌ ವಿರುದ್ಧ ಟಾಸ್‌ ಗೆದ್ದಿರುವ ಪಂಜಾಬ್‌ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಎರಡೂ ತಂಡಗಳಲ್ಲಿ ಸಿಡಿಲಬ್ಬರದ ಬ್ಯಾಟ್ಸ್‌ಮನ್‌ಗಳು ಇರುವುದರಿಂದ ರನ್‌ಗಳ ಹೊಳೆ ಹರಿಯುವ ನಿರೀಕ್ಷೆ ಮೂಡಿದೆ.

ಕಿಂಗ್ಸ್‌ನಲ್ಲಿ ಕ್ರಿಸ್ ಗೇಲ್, ಕೆ.ಎಲ್. ರಾಹುಲ್, ಮಯಂಕ್ ಅಗರವಾಲ್ ಟೂರ್ನಿಯ ಮೊದಲ ಹಂತದಲ್ಲಿ ಅಮೋಘ ಲಯದಲ್ಲಿದ್ದರು. ರನ್‌ಗಳನ್ನು ಪೇರಿಸಿದ್ದರು. ರಾಯಲ್ಸ್‌ ತಂಡದಲ್ಲಿರುವ ಲಿಯಾಮ್ ಲಿವಿಂಗ್‌ಸ್ಟೋನ್, ಎವಿನ್ ಲೂಯಿಸ್ ಕೂಡ ಬಲಾಢ್ಯ ಬ್ಯಾಟ್ಸ್‌ಮನ್‌ಗಳೇ ಆಗಿದ್ದಾರೆ.

ಪಂಜಾಬ್ ತಂಡದ ಆರಂಭಿಕ ಜೋಡಿ ರಾಹುಲ್ ಮತ್ತು ಮಯಂಕ್ ಅಗರವಾಲ್ ಅವರನ್ನು ನಿಯಂತ್ರಿಸುವುದು ರಾಜಸ್ಥಾನ್ ಬೌಲರ್‌ಗಳ ಮುಂದಿರುವ ಪ್ರಮುಖ ಹಾಗೂ ಕಠಿಣ ಸವಾಲು ಆಗಿದೆ.

ಓದಿ... IPL 2021 LIVE | PBKS vs RR: ಪಂಜಾಬ್‌ ಕಿಂಗ್ಸ್‌ ವಿರುದ್ಧ ರಾಜಸ್ಥಾನ್‌ ಉತ್ತಮ ಆರಂಭ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು