ಸೋಮವಾರ, ಅಕ್ಟೋಬರ್ 25, 2021
26 °C

IPL 2021: ನಿಷೇಧದ ಭೀತಿಯಲ್ಲಿ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್!

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 33 ರನ್ ಅಂತರದ ಸೋಲಿಗೆ ಶರಣಾಗಿತ್ತು.

ಇದರೊಂದಿಗೆ ನಿಧಾನಗತಿಯ ಓವರ್‌ರೇಟ್‌ಗಾಗಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೇಲೆ ₹24 ಲಕ್ಷ ದಂಡ ಹೇರಲಾಗಿದೆ.

ಇದನ್ನೂ ಓದಿ: 

ಗಾಯದ ಮೇಲೆ ಬರೆ ಎಳೆದಂತೆ ಸಂಜು ಸ್ಯಾಮ್ಸನ್ ನಿಷೇಧದ ಭೀತಿಯನ್ನು ಎದುರಿಸುತ್ತಿದ್ದಾರೆ. ಸತತ ಎರಡನೇ ಬಾರಿಗೆ ಓವರ್‌ರೇಟ್ ಕಾಯ್ದುಕೊಳ್ಳುವಲ್ಲಿ ಸಂಜು ವಿಫಲರಾಗಿದ್ದಾರೆ.

ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲೂ ನಿಧಾನಗತಿಯ ಓವರ್‌ರೇಟ್‌ಗಾಗಿ ಸಂಜು ಮೇಲೆ ₹12 ಲಕ್ಷ ದಂಡ ವಿಧಿಸಲಾಗಿತ್ತು.

ಐಪಿಎಲ್ ನಿಯಮಾವಳಿಗಳ ಪ್ರಕಾರ ಈಗ ಮೂರನೇ ಬಾರಿಯೂ ತಪ್ಪು ಪುನರಾವರ್ತನೆಯಾದರೆ ₹30 ಲಕ್ಷ ದಂಡ ಸಹಿತ ಮುಂದಿನ ಒಂದು ಪಂದ್ಯ ನಿಷೇಧ ಶಿಕ್ಷೆ ಎದುರಿಸಬೇಕಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು