ಶನಿವಾರ, ಅಕ್ಟೋಬರ್ 16, 2021
22 °C

ಮರಳುನಾಡಿನಲ್ಲಿ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳ ವೈಫಲ್ಯ; ಕೇವಲ 92ಕ್ಕೆ ಆಲೌಟ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 92 ರನ್ನಿಗೆ ಆಲೌಟ್ ಆಗಿದೆ. 

ಕೆಕೆಆರ್ ಬೌಲರ್‌ಗಳ ನಿಖರ ದಾಳಿಗೆ ಸಿಲುಕಿದ ಆರ್‌ಸಿಬಿ 19 ಓವರ್‌ಗಳಲ್ಲೇ 92 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. 

ಇದು ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿಯಿಂದ ದಾಖಲಾದ ಆರನೇ ಅತಿ ಕನಿಷ್ಠ ಮೊತ್ತವಾಗಿದೆ. ಈ ಹಿಂದೆ ಕೆಕೆಆರ್ ವಿರುದ್ಧವೇ 2017ರಲ್ಲಿ 49 ಹಾಗೂ 2008ರಲ್ಲಿ 82 ರನ್ನಿಗೆ ಆಲೌಟ್ ಆಗಿತ್ತು. 

ಈ ಮೊದಲು ಭಾರತದಲ್ಲಿ ನಡೆದ ಟೂರ್ನಿಯ ಮೊದಲಾರ್ಧದಲ್ಲಿ ಅಮೋಘ ಪ್ರದರ್ಶನ ನೀಡಿದ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ಮೂಡಿಬರಲಿಲ್ಲ. ಇದು ಅಭಿಮಾನಿಗಳಲ್ಲಿ ಬೇಸರಕ್ಕೆ ಕಾರಣವಾಗಿದೆ. 

200ನೇ ಪಂದ್ಯ ಆಡುತ್ತಿರುವ ನಾಯಕ ವಿರಾಟ್ ಕೊಹ್ಲಿ (5)  ತಮ್ಮ ಪಂದ್ಯವನ್ನು ಸ್ಮರಣೀಯವಾಗಿಸುವಲ್ಲಿ ಯಶಸ್ವಿಯಾಗಲಿಲ್ಲ. ದೇವದತ್ತ ಪಡಿಕ್ಕಲ್ (22), ಗ್ಲೆನ್ ಮ್ಯಾಕ್ಸ್‌ವೆಲ್ (10), ಎಬಿ ಡಿವಿಲಿಯರ್ಸ್ (0) ನಿರಾಸೆ ಮೂಡಿಸಿದರು. 

ಇಲ್ಲಿ ಗಮನಾರ್ಹ ಅಂಶವೆಂದರೆ ಏಳು ವರ್ಷಗಳ ಹಿಂದೆ ಆರ್‌ಸಿಬಿ, ಅಬುಧಾಬಿ ಮೈದಾನದಲ್ಲೇ ರಾಜಸ್ಥಾನ ರಾಯಲ್ಸ್ ವಿರುದ್ಧ ಕೇವಲ 70 ರನ್ನಿಗೆ ಆಲೌಟಾಗಿತ್ತು. 

ಐಪಿಎಲ್‌ನಲ್ಲಿ ಆರ್‌ಸಿಬಿಯ ಕನಿಷ್ಠ ಮೊತ್ತ ಇಂತಿದೆ:
49 ರನ್, ಕೋಲ್ಕತ್ತ ವಿರುದ್ಧ, 2017, ಕೋಲ್ಕತ್ತ,
70 ರನ್, ರಾಜಸ್ಥಾನ್ ವಿರುದ್ಧ, 2014, ಅಬುಧಾಬಿ,
70 ರನ್, ಚೆನ್ನೈ ವಿರುದ್ಧ, 2019, ಚೆನ್ನೈ,
82 ರನ್, ಕೋಲ್ಕತ್ತ ವಿರುದ್ಧ, 2008, ಬೆಂಗಳೂರು,
87 ರನ್, ಚೆನ್ನೈ ವಿರುದ್ಧ, 2009, ಪೋರ್ಟ್ ಎಲಿಜಬೆತ್,
92 ರನ್, ಕೋಲ್ಕತ್ತ ವಿರುದ್ಧ, 2021, ಅಬುಧಾಬಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು