ಬೆಂಗಳೂರು: ದೇಹ ದಂಡನೆಯ ವಿಡಿಯೊವನ್ನು ಸಾಮಾಜಿಕ ತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಮತ್ತೆ ಪುಟಿದೇಳುವ ಸಂದೇಶವನ್ನು ವಿರಾಟ್ ಕೊಹ್ಲಿ ನೀಡಿದ್ದಾರೆ.

ಇಂದು (ಶುಕ್ರವಾರ) ಶಾರ್ಜಾದಲ್ಲಿ ನಡೆಯಲಿರುವ ಐಪಿಎಲ್ 2021ನೇ ಸಾಲಿನ ಸಿಎಸ್ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿ ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್ ಆಗಿದೆ.

ದೇಹ ದಂಡಿಸುತ್ತಿರುವ ವಿಡಿಯೊಗೆ 'ರೈಸ್ & ಗ್ರೈಂಡ್' ಎಂಬ ಶೀರ್ಷಿಕೆಯನ್ನೂ ಆರ್ಸಿಬಿ ನಾಯಕ ನೀಡಿದ್ದಾರೆ.

ಸತತ ವೈಫಲ್ಯಗಳಿಂದ ಬಳಲಿರುವ ಕೊಹ್ಲಿಯವರು ಈ ವಿಡಿಯೊವನ್ನು ಹಂಚಿಕೊಳ್ಳುವ ಮೂಲಕ ಮತ್ತೆ ಫಾರ್ಮ್ ಕಂಡುಕೊಳ್ಳುವ ಭರವಸೆಯ ಸಂದೇಶವನ್ನು ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಐಪಿಎಲ್ 2021ನೇ ಸಾಲಿನ ಟಿ 20 ಕ್ರಿಕೆಟ್ ಟೂರ್ನಿಯ ಬಳಿಕ ಆರ್ಸಿಬಿ ತಂಡದ ನಾಯಕತ್ವವನ್ನು ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಆದರೆ ಅದಕ್ಕಿಂತಲೂ ಮೊದಲೇ ವಿರಾಟ್ ಕೊಹ್ಲಿ ತಲೆದಂಡವಾಗಲಿದೆ ಎಂದು ಸುದ್ದಿಗಳೂ ಹರಿದಾಡುತ್ತಿವೆ.

ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಎರಡನೇ ಹಂತದ ಮೊದಲ ಪಂದ್ಯದಲ್ಲೇ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿ ಕೇವಲ 92 ರನ್ನಿಗೆ ಆಲೌಟ್ ಆಗಿತ್ತು. ಇದು ಐಪಿಎಲ್ನಲ್ಲಿ ಆರ್ಸಿಬಿಯಿಂದ ದಾಖಲಾದ ಆರನೇ ಕನಿಷ್ಠ ಮೊತ್ತವಾಗಿದೆ. ನಾಲ್ಕು ಎಸೆತಗಳನ್ನು ಎದುರಿಸಿರುವ ಕೊಹ್ಲಿ ಕೇವಲ 5 ರನ್ ಗಳಿಸಿ ಔಟಾದರು.

2013ರಲ್ಲಿ ವಿರಾಟ್ ಕೊಹ್ಲಿ ಆರ್ಸಿಬಿ ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ, ಕಳೆದ ಎಂಟು ವರ್ಷಗಳಲ್ಲಿ ಟ್ರೋಫಿ ಗೆಲ್ಲಲು ಆರ್ಸಿಬಿಯಿಂದ ಸಾಧ್ಯವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.