ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021: ರೋಹಿತ್ ಶರ್ಮಾ ದಾಖಲೆ ಮುರಿದ ಕಿಂಗ್ ಕೊಹ್ಲಿ

Last Updated 24 ಸೆಪ್ಟೆಂಬರ್ 2021, 15:31 IST
ಅಕ್ಷರ ಗಾತ್ರ

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಸಾಧನೆ ಮಾಡಿದ್ದಾರೆ.

ಇದು ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಸಿಡಿದ 41ನೇ ಅರ್ಧಶತಕದ ಸಾಧನೆಯಾಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ದಾಖಲೆಯನ್ನು ಮುರಿದಿದ್ದಾರೆ.

201ನೇ ಪಂದ್ಯ ಆಡುತ್ತಿರುವ ವಿರಾಟ್, 193ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಅತ್ತ ರೋಹಿತ್ ಶರ್ಮಾ 208 ಪಂದ್ಯಗಳಲ್ಲಿ (203 ಇನ್ನಿಂಗ್ಸ್) 40 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯನ್ನು ಡೇವಿನ್ ವಾರ್ನರ್ ಮುನ್ನಡೆಸುತ್ತಿದ್ದು, ಒಟ್ಟು 50 ಅರ್ಧಶತಕಗಳನ್ನು ಗಳಿಸಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಶಿಖರ್ ಧವನ್, 44 ಅರ್ಧಶತಕಗಳನ್ನು ಬಾರಿಸಿದ್ದಾರೆ. ಪ್ರಸ್ತುತ ಪಟ್ಟಿಯಲ್ಲಿ ಕೊಹ್ಲಿ ಹಾಗೂ ರೋಹಿತ್, ಕ್ರಮವಾಗಿ ಮೂರು ಹಾಗೂ ನಾಲ್ಕನೇ ಸ್ಥಾನಗಳಲ್ಲಿದ್ದಾರೆ.

ಚೆನ್ನೈ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 41 ಎಸೆತಗಳನ್ನು ಎದುರಿಸಿದ ವಿರಾಟ್ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು. ಅಲ್ಲದೆ ದೇವದತ್ತ ಪಡಿಕ್ಕಲ್ ಜೊತಗೆ ಮೊದಲ ವಿಕೆಟ್‌ಗೆ 13.2 ಓವರ್‌ಗಳಲ್ಲಿ 111 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT