ಶುಕ್ರವಾರ, ಅಕ್ಟೋಬರ್ 22, 2021
28 °C

IPL 2021: ಕೆಕೆಆರ್‌ ವಿರುದ್ಧ ಸೋತ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಕಿಂಗ್ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಶಾರ್ಜಾ: ಐಪಿಎಲ್ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಸೋತ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಭಾವುಕರಾಗಿ ಕಣ್ಣೀರಿಟ್ಟ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾಯಕನಾಗಿ ಕೊಹ್ಲಿ ಅವರಿಗೆ ಇದು ಕೊನೆಯ ಐಪಿಎಲ್ ಟೂರ್ನಿಯಾಗಿದೆ. ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ ಕೊಹ್ಲಿ ಅವರಿಗೆ ನಾಯಕತ್ವದಿಂದ ವಿದಾಯ ಹೇಳಬೇಕೆಂದುಕೊಂಡಿದ್ದ ಆರ್‌ಸಿಬಿಗೆ ಕೆಕೆಆರ್‌ನ ಸುನಿಲ್ ನರೈನ್ ಭರ್ಜರಿ ಆಟದ ಮೂಲಕ ಆಘಾತ ನೀಡಿದ್ದರು. 4 ವಿಕೆಟ್ ಗಳಿಸುವ ಮೂಲಕ ಆರ್‌ಸಿಬಿ ಬ್ಯಾಟಿಂಗ್‌ಗೆ ಕಡಿವಾಣ ಹಾಕಿದ್ದ ನರೈನ್ ಬ್ಯಾಟಿಂಗ್‌ನಲ್ಲೂ ಮಿಂಚಿದ್ದರು. ಹ್ಯಾಟ್ರಿಕ್ ಸಿಕ್ಸ್ ಸೇರಿದಂತೆ 26 ರನ್‌ ಗಳಿಸಿ ಆರ್‌ಸಿಬಿ ಗೆಲುವಿಗೆ ತಡೆಯೊಡ್ಡಿದ್ದರು. ಪರಿಣಾಮವಾಗಿ ಕೆಕೆಆರ್ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. ಆರ್‌ಸಿಬಿ ಟೂರ್ನಿಯಿಂದ ಹೊರ ನಡೆಯಬೇಕಾಯಿತು.

ಪಂದ್ಯದ ಬಳಿಕ ಸಹ ಆಟಗಾರರ ಜತೆ ಸೇರಿ ಮಾತನಾಡುತ್ತಿದ್ದ ವೇಳೆ ಭಾವುಕರಾದ ಕೊಹ್ಲಿ ಮೈದಾನದಲ್ಲೇ ಕಣ್ಣೀರಿಟ್ಟು ಅಳುತ್ತಿದ್ದ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿತ್ತು. ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು