ಬುಧವಾರ, ಅಕ್ಟೋಬರ್ 20, 2021
28 °C

IPL 2021: ವಿರಾಟ್ ಕೊಹ್ಲಿ ಶೈಲಿಯನ್ನು ಅನುಕರಿಸಿದ ಎಬಿ ಡಿವಿಲಿಯರ್ಸ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ಪಂದ್ಯ ಗೆಲುವಿನ ವೇಳೆ ವಿರಾಟ್ ಕೊಹ್ಲಿ ಸಂಭ್ರಮ ಆಚರಿಸುವ ಶೈಲಿಯನ್ನು ಸಹ ಆಟಗಾರ ಎಬಿ ಡಿವಿಲಿಯರ್ಸ್ ಅನುಕರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು.

ಇದನ್ನೂ ಓದಿ: 

ಗೆಲುವಿನ ಬಳಿಕ ಡ್ರೆಸಿಂಗ್ ಕೊಠಡಿಯಲ್ಲಿ ನಡೆದ ಟೀಮ್ ಮೀಟಿಂಗ್ ಕೊನೆಯಲ್ಲಿ ಎಬಿ ಡಿವಿಲಿಯರ್ಸ್, ನಾಯಕ ವಿರಾಟ್ ಕೊಹ್ಲಿ ಸಂಭ್ರಮ ಆಚರಿಸುವ ಶೈಲಿಯನ್ನು ಅನುಕರಿಸಿದ್ದಾರೆ.

 

 

 

ಏತನ್ಮಧ್ಯೆ ಈ ಗೆಲುವಿನೊಂದಿಗೆ ಆಟಗಾರರು ಮೈಮರೆಯದಂತೆ ನಾಯಕ ವಿರಾಟ್ ಕೊಹ್ಲಿ ಎಚ್ಚರಿಸಿದ್ದಾರೆ.

 

ಇದೇ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ 10,000 ರನ್‌ಗಳ ಮೈಲಿಗಲ್ಲು ಕ್ರಮಿಸಿದ್ದಾರೆ. ಅತ್ತ ಹರ್ಷಲ್ ಪಟೇಲ್ 'ಹ್ಯಾಟ್ರಿಕ್' ವಿಕೆಟ್ ಸಾಧನೆ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಐಪಿಎಲ್ ಆವೃತ್ತಿಯೊಂದರಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ಗೆಲುವು ದಾಖಲಿಸಿದೆ. ಭಾರತದಲ್ಲಿ ನಡೆದ ಟೂರ್ನಿಯ ಮೊದಲಾರ್ಧದಲ್ಲಿ ಹರ್ಷಲ್ ಪಟೇಲ್ ಐದು ವಿಕೆಟ್ ನೆರವಿನಿಂದ ವಿರಾಟ್ ಕೊಹ್ಲಿ ಬಳಗವು ಎರಡು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು