ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021: ಹರ್ಷಲ್ ಪಟೇಲ್ ಮ್ಯಾಜಿಕ್; ಚೊಚ್ಚಲ ಐದು ವಿಕೆಟ್ ಸಾಧನೆ

Last Updated 9 ಏಪ್ರಿಲ್ 2021, 16:22 IST
ಅಕ್ಷರ ಗಾತ್ರ

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಹರ್ಷಲ್ ಪಟೇಲ್, ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಐದು ವಿಕೆಟ್ ಸಾಧನೆ ಮಾಡಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹರ್ಷಲ್ ಪಟೇಲ್ ಸ್ಮರಣೀಯ ಸಾಧನೆ ಮಾಡಿದರು.

ಇದು ಐಪಿಎಲ್‌ನಲ್ಲಿ ಹರ್ಷಲ್ ಪಟೇಲ್ ಅವರು ಜೀವನಶ್ರೇಷ್ಠ ಬೌಲಿಂಗ್ ಸಾಧನೆಯೂ ಕೂಡಾ ಆಗಿದೆ. 27 ರನ್ ತೆತ್ತಿರುವ ಹರ್ಷಲ್ ಐದು ವಿಕೆಟ್ ಕಬಳಿಸಿದರು.

ಒಂದು ಹಂತದಲ್ಲಿ 10 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಮುಂಬೈ ಹರ್ಷಲ್ ದಾಳಿಗೆ ಕುಸಿದು ಒಂಬತ್ತು ವಿಕೆಟ್ ನಷ್ಟಕ್ಕೆ 159 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

ಪ್ರಭಾವಿ ದಾಳಿ ಸಂಘಟಿಸಿದ ಹರ್ಷಲ್, ಮುಂಬೈ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಿದರು. ಇಶಾನ್ ಕಿಶನ್ (28), ಹಾರ್ದಿಕ್ ಪಾಂಡ್ಯ (13) ಸೇರಿದಂತೆ ಐದು ವಿಕೆಟ್‌ಗಳನ್ನು ಪಡೆದು ಮುಂಬೈ ಓಟಕ್ಕೆ ಕಡಿವಾಣ ಹಾಕಿದರು.

ಇದರಲ್ಲಿ ಕೊನೆಯ ಓವರ್‌ನಲ್ಲಿ ಮೂರು ವಿಕೆಟ್‌ ಸಹ ಸೇರಿವೆ. ಈ ನುಡವೆ ಸ್ವಲ್ಪದರಲ್ಲೇ ಹ್ಯಾಟ್ರಿಕ್ ಪಡೆಯುವ ಅವಕಾಶದಿಂದ ವಂಚಿತರಾದರು.

ಆರ್‌ಸಿಬಿ ತಂಡವು ಡೆತ್ ಬೌಲಿಂಗ್‌‍ನಲ್ಲಿ ಸದಾ ವೈಫಲ್ಯವನ್ನು ಅನುಭವಿಸಿತ್ತು. ಆದರೆ ಈ ಬಾರಿ ಹರ್ಷಲ್ ಉತ್ತಮ ನಿರೀಕ್ಷೆಯನ್ನು ಮೂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT