ಭಾನುವಾರ, ಅಕ್ಟೋಬರ್ 24, 2021
23 °C

ಕೊಹ್ಲಿ-ರೋಹಿತ್ ನಡುವೆ ಭಿನ್ನಾಭಿಪ್ರಾಯವಿದೆ ಎಂದವರಿಗೆ ಇಲ್ಲಿದೆ ಉತ್ತರ!

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಆರೋಪ ಕಳೆದ ಕೆಲವು ವರ್ಷಗಳಿಂದಲೂ ಕೇಳಿ ಬರುತ್ತಿದೆ. ಆದರೆ ಇದನ್ನು ಹಗುರವಾಗಿ ಪರಿಗಣಿಸಿರುವ ಆಟಗಾರರು ತಮ್ಮ ಆಟದ ಮೇಲೆ ಗಮನ ಕೇಂದ್ರಿಕರಿಸಿದ್ದಾರೆ.

ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರಗಳು ಕೊಹ್ಲಿ ಹಾಗೂ ರೋಹಿತ್ ನಡುವೆ ಯಾವುದೇ ರೀತಿಯ ಭಿನ್ನಪ್ರಾಯಗಳಿಲ್ಲ ಎಂಬುದನ್ನು ಸಾಬೀತುಪಡಿಸುತ್ತಿದೆ. 

ಇದನ್ನೂ ಓದಿ: 

ಇಬ್ಬರ ನಡುವೆ ಭಿನ್ನಮತವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. 

 

 

 

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಬಳಿಕ ರೋಹಿತ್ ಶರ್ಮಾ ಬಳಿ ತೆರಳಿರುವ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ, ಗಾಯದ ಕುರಿತು ವಿಚಾರಿಸಿದ್ದಾರೆ ಎಂಬುದು ತಿಳಿದು ಬಂದಿದೆ.

 

ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಅಲ್ಲದೆ ಓರ್ವ ಆಟಗಾರನಾಗಿ ಆಯ್ಕೆಗೆ ಲಭ್ಯರಿರುತ್ತಾರೆ.

ವಿರಾಟ್ ಬಳಿಕ ಟಿ20 ನಾಯಕ ಸ್ಥಾನಕ್ಕೆ ರೋಹಿತ್ ಶರ್ಮಾ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು