ಸೋಮವಾರ, ಅಕ್ಟೋಬರ್ 25, 2021
26 °C

ಕಿಂಗ್ ಕೊಹ್ಲಿ ಐತಿಹಾಸಿಕ ಸಾಧನೆ; ಟಿ20 ಕ್ರಿಕೆಟ್‌ನಲ್ಲಿ 10,000 ರನ್ ಮೈಲಿಗಲ್ಲು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ರನ್ ಮೆಶಿನ್ ಖ್ಯಾತಿಯ ವಿರಾಟ್ ಕೊಹ್ಲಿ ಮಗದೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಟ್ವೆಂಟಿ-20 ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲಿಗಲ್ಲು ತಲುಪಿದ್ದಾರೆ.

ಅಷ್ಟೇ ಯಾಕೆ ಈ ಸಾಧನೆ ಮಾಡಿದ ವಿಶ್ವದ ಐದನೇ ಹಾಗೂ ಭಾರತದ ಮೊಟ್ಟ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: 

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಐತಿಹಾಸಿಕ ದಾಖಲೆ ಬರೆದರು.

ಸಿಕ್ಸರ್ ಬಾರಿಸುವ ಮೂಲಕ ಕಿಂಗ್ ಕೊಹ್ಲಿ, ಟಿ20 ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲಿಗಲ್ಲು ಕ್ರಮಿಸಿದ್ದಾರೆ.

 

 

 

ಮುಂಬೈ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಕೊಹ್ಲಿ, ಐಪಿಎಲ್‌ನಲ್ಲಿ 42ನೇ ಅರ್ಧಶತಕ ಸಾಧನೆ ಮಾಡಿದರು. 37 ಎಸೆತಗಳನ್ನು ಎದುರಿಸಿದ ಕೊಹ್ಲಿ, ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು.

 

ಅಂದ ಹಾಗೆ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯು ವೆಸ್ಟ್‌ಇಂಡೀಸ್‌ನ ದೈತ್ಯ ಕ್ರಿಸ್ ಗೇಲ್ ಹೆಸರಲ್ಲಿದೆ. ಅವರು ಒಟ್ಟು 14,275 ರನ್ ಗಳಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸರದಾರರು:

1. ಕ್ರಿಸ್ ಗೇಲ್ (ವೆಸ್ಟ್‌ಇಂಡೀಸ್): 14,275
2. ಕೀರನ್ ಪೊಲಾರ್ಡ್ (ವೆಸ್ಟ್‌ಇಂಡೀಸ್): 11,195
3. ಶೋಯಬ್ ಮಲಿಕ್ (ಪಾಕಿಸ್ತಾನ): 10,808
4. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): 10,019
5. ವಿರಾಟ್ ಕೊಹ್ಲಿ (ಭಾರತ): 10,000*

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು