ಮಂಗಳವಾರ, ಏಪ್ರಿಲ್ 13, 2021
29 °C

IPL 2021: ಆರ್‌ಸಿಬಿ ಮತ್ತು ಮುಂಬೈ ಮಧ್ಯೆ ಇಂದು ಮೊದಲ ಪಂದ್ಯ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

PTI File

ಬೆಂಗಳೂರು: ಆರ್‌ಸಿಬಿ.. ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯಾವಳಿ ಏಪ್ರಿಲ್ 9, ಶುಕ್ರವಾರದಿಂದ ಆರಂಭವಾಗುತ್ತಿದೆ. ಮೊದಲ ಪಂದ್ಯ ಮುಂಬಯಿ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದ್ದು, ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ ಸಜ್ಜಾಗಿದೆ.

ಸಂಜೆ 7.30 ಆರಂಭವಾಗುವ ಪಂದ್ಯದಲ್ಲಿ, ಆರ್‌ಸಿಬಿ ತಂಡವನ್ನು ಮುಂಬೈ ಇಂಡಿಯನ್ಸ್ ಎದುರಿಸುತ್ತಿದೆ. ವಿರಾಟ್ ಕೊಹ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದು, ರೋಹಿತ್ ಶರ್ಮಾ ಮುಂಬೈ ತಂಡದ ನಾಯಕನಾಗಿದ್ದಾರೆ.

ವಿರಾಟ್ ಕೊಹ್ಲಿ ಆರಂಭಿಕ ಆಟಗಾರನಾಗಿ ಆರ್‌ಸಿಬಿಯಿಂದ ಕಣಕ್ಕಿಳಿಯಲಿದ್ದಾರೆ. ಜತೆಗೆ ದೇವದತ್ತ ಪಡಿಕ್ಕಲ್, ಎ ಬಿ ಡಿವಿಲಿಯರ್ಸ್, ಯಜುವೇಂದ್ರ ಚಹಲ್ ಕೂಡ ಆರ್‌ಸಿಬಿ ಬೆಂಬಲಕ್ಕಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ, ರಾಹುಲ್ ಚಹರ್, ಕೃಣಾಲ್ ಪಾಂಡ್ಯ ಕೂಡ ಇದ್ದಾರೆ.

ಉಭಯ ತಂಡಗಳ ಬಲಾಬಲ

ಒಟ್ಟು ಪಂದ್ಯ: 27

ಎಂಐ: 17

ಆರ್‌ಸಿಬಿ: 10

ಕಳೆದ ಐದು ಪಂದ್ಯಗಳ ವಿವರ

ಮುಂಬೈ ಇಂಡಿಯನ್ಸ್ ಐದು ಪಂದ್ಯಗಳ ಪೈಕಿ ಒಂದನ್ನು ಸೋತಿದ್ದು, ನಾಲ್ಕರಲ್ಲಿ ಗೆಲುವು ಸಾಧಿಸಿದೆ.

ಆರ್‌ಸಿಬಿ ಸತತ ಐದು ಸೋಲು ಕಂಡಿದೆ.

ಪಂದ್ಯ ಇಂದು ಸಂಜೆ 7.30ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್‌ ನೆಟ್‌ವರ್ಕ್ ಮತ್ತು ಡಿಸ್ನಿ+ಹಾಟ್‌ಸ್ಟಾರ್ ಮೂಲಕ ಪಂದ್ಯ ವೀಕ್ಷಿಸಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು