ಭಾನುವಾರ, ಅಕ್ಟೋಬರ್ 24, 2021
20 °C

IPL 2021: 29 ಬಾಲ್ ಫಿಫ್ಟಿ; 400 ರನ್ ಗಡಿ ದಾಟಿದ ಮ್ಯಾಕ್ಸ್‌ವೆಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶಾರ್ಜಾ: ಭಾನುವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 29 ಎಸೆತಗಳಲ್ಲಿ ಫಿಫ್ಟಿ ಸಾಧನೆ ಮಾಡಿದ್ದಾರೆ. 

ಈ ಮೂಲಕ ಆರ್‌ಸಿಬಿ ತಂಡವು ಏಳು ವಿಕೆಟ್ ನಷ್ಟಕ್ಕೆ 164 ರನ್‌ಗಳ ಸವಾಲಿನ ಮೊತ್ತ ಗಳಿಸುವಲ್ಲಿ ಯಶಸ್ವಿಯಾಗಿದೆ. 

ಒಂದು ಹಂತದಲ್ಲಿ 73 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡಿದ್ದ ಆರ್‌ಸಿಬಿ ಹಿನ್ನೆಡೆಗೊಳಗಾಗಿತ್ತು. ಈ ಹಂತದಲ್ಲಿ ಆಕ್ರಮಣಕಾರಿಯಾಗಿ ಆಡಿದ ಮ್ಯಾಕ್ಸ್‌ವೆಲ್ ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು. 

ಎಬಿ ಡಿ ವಿಲಿಯರ್ಸ್ ಜೊತೆಗೆ ನಾಲ್ಕನೇ ವಿಕೆಟ್‌ಗೆ 73 ರನ್‌ಗಳ ಜೊತೆಯಾಟ ಕಟ್ಟಿದ ಮ್ಯಾಕ್ಸ್‌ವೆಲ್ 57 ರನ್ ಗಳಿಸಿದರು. 33 ಎಸೆತಗಳ ಅಮೋಘ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳು ಸೇರಿದ್ದವು. 

ಅಲ್ಲದೆ ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ 400 ರನ್‌ ಕ್ರಮಿಸಿದ್ದಾರೆ. ಆಡಿರುವ 12 ಪಂದ್ಯಗಳಲ್ಲಿ 40.70 ಸರಾಸರಿಯಲ್ಲಿ ಒಟ್ಟು 407 ರನ್ ಗಳಿಸಿದ್ದಾರೆ. ಇದರಲ್ಲಿ ಐದು ಅರ್ಧಶತಕಗಳು ಒಳಗೊಂಡಿವೆ. ಈ ಮೂಲಕ ಅತಿ ಹೆಚ್ಚು ರನ್ ಗಳಿಕೆಯ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. 

100 ಮೀಟರ್ ದೂರದ ಸಿಕ್ಸರ್ ಮ್ಯಾಕ್ಸ್‌ವೆಲ್ ಅಬ್ಬರಕ್ಕೆ ಸಾಕ್ಷಿಯಾಗಿತ್ತು. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು